
ಕೊರೊನಾ ಒಂದನೇ ಅಲೆಗಿಂತ ಕೊರೊನಾ ಎರಡನೇ ಅಲೆ ಹೆಚ್ಚು ಅಪಾಯಕಾರಿಯಾಗಿತ್ತು. ಕೊರೊನಾ ಮೂರನೇ ಅಲೆ ಮತ್ತಷ್ಟು ಭಯಾನಕವಾಗಿರಲಿದೆ ಎಂದು ದೆಹಲಿ ಐಐಟಿ, ದೆಹಲಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಪ್ರತಿದಿನ ಸುಮಾರು 45,000 ಪ್ರಕರಣಗಳು ದಾಖಲಾಗುವ ಸಾಧ್ಯತೆಯಿದೆ ಎಂದು ಐಐಟಿ ಹೇಳಿದೆ. ಈ ಪೈಕಿ 9,000 ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಬೇಕಾಗುತ್ತದೆ ಎಂದು ವರದಿಯಲ್ಲಿ ಹೇಳಲಾಗಿದ್ದು, ಇದನ್ನು ದೆಹಲಿ ಹೈಕೋರ್ಟ್‌ಗೆ ಸಲ್ಲಿಸಲಾಗಿದೆ.
ಇಂತಹ ಬಿಕ್ಕಟ್ಟನ್ನು ಎದುರಿಸಲು ದೆಹಲಿ ನಗರದಲ್ಲಿ ಪ್ರತಿದಿನ ಒಟ್ಟು 944 ಮೆಟ್ರಿಕ್ ಟನ್ ಆಮ್ಲಜನಕದ ಅಗತ್ಯವಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ವರದಿ ಪರಿಶೀಲಿಸಿದ ಕೋರ್ಟ್ 4 ವಾರಗಳಲ್ಲಿ ಚಾರ್ಟ್ ಸಲ್ಲಿಸುವಂತೆ ದೆಹಲಿ ಸರ್ಕಾರಕ್ಕೆ ಸೂಚನೆ ನೀಡಿದೆ. ವರದಿಯಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವ ಯೋಜನೆಯನ್ನು ನೀಡಲಾಗಿದೆ. ಸರ್ಕಾರವು ವಿವಿಧ ಸ್ಥಳಗಳಲ್ಲಿ ಮತ್ತು ಆಸ್ಪತ್ರೆಗಳಲ್ಲಿ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಬೇಕೆಂದು ಸಲಹೆ ನೀಡಲಾಗಿದೆ.
ಶತಮಾನಕ್ಕೆ ಒಮ್ಮೆ ಬರುವ ಸಾಂಕ್ರಾಮಿಕ ರೋಗವನ್ನು ಎದುರಿಸುತ್ತಿದ್ದೇವೆ. ಐತಿಹಾಸಿಕ ಪುರಾವೆಗಳ ಪ್ರಕಾರ 1920ರಲ್ಲಿ ಸಾಂಕ್ರಾಮಿಕ ರೋಗ ಕಾಣಸಿಕೊಂಡಿತ್ತು. ಸದ್ಯ ಆಮ್ಲಜನಕ ಉತ್ಪಾದನಾ ಘಟಕದ ಸ್ಥಾಪನೆಗೆ ಮೊದಲ ಆದ್ಯತೆ ನೀಡಬೇಕೆಂದು ವರದಿಯಲ್ಲಿ ಹೇಳಲಾಗಿದೆ.