ಭಾರತೀಯ ವೈದ್ಯಕೀಯ ಸಂಘ ಹಾಗೂ ಯೋಗಗುರು ಬಾಬಾ ರಾಮದೇವ್ ನಡುವಿನ ವಿವಾದ ತಾರಕಕ್ಕೇರಿದೆ. ಅಲೋಪಥಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಬಾಬಾ ರಾಮದೇವ್ ವಿರುದ್ಧ ಭಾರತೀಯ ವೈದ್ಯಕೀಯ ಸಂಘ ಗುರುವಾರ ಎಫ್ಐಆರ್ ದಾಖಲಿಸಿದೆ.
ನಾವು ದೂರನ್ನ ಸ್ವೀಕರಿಸಿದ್ದು ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ ಎಂದು ದೆಹಲಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿ ಮಾಹಿತಿ ನೀಡಿದ್ದಾರೆ. ಭಾರತೀಯ ವೈದ್ಯಕೀಯ ಸಂಘ ನೀಡಿರುವ ದೂರಿನಲ್ಲಿ : ಕೊರೊನಾ ಪರಿಸ್ಥಿತಿಯ ಲಾಭ ಪಡೆದ ಬಾಬಾ ರಾಮದೇವ್ ಸೋಶಿಯಲ್ ಮೀಡಿಯಾ ವೇದಿಕೆಯಲ್ಲಿ ಅಲೋಪಥಿ ವಿರುದ್ಧ ಇಲ್ಲ ಸಲ್ಲದ ಹೇಳಿಕೆ ನೀಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ.
ಭಾರತೀಯ ವೈದ್ಯಕೀಯ ಸಂಘ ಈ ವಿಚಾರವಾಗಿ ಈಗಾಗಲೇ ಪ್ರಧಾನಿ ಮೋದಿಯವರಿಗೂ ಪತ್ರವನ್ನ ಬರೆದಿದೆ. ಕೋವಿಡ್ 19 ಚಿಕಿತ್ಸೆಯ ವಿರುದ್ಧ ಜನರಲ್ಲಿ ತಪ್ಪು ಸಂದೇಶ ರವಾನಿಸುತ್ತಿರುವ ಬಾಬಾ ರಾಮದೇವ್ ವಿರುದ್ಧ ದೇಶ ದ್ರೋಹ ಪ್ರಕರಣವನ್ನ ದಾಖಲಿಸಬೇಕು ಎಂದು ಮನವಿ ಮಾಡಿದೆ.