ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ತ್ರಿಭಾಷಾ ಸೂತ್ರವನ್ನು ಬಲವಾಗಿ ವಿರೋಧಿಸಿರುವ ಮಂಡ್ಯ ಲೋಕಸಭಾ ಸದಸ್ಯೆ ಸುಮಲತಾ, ನಾವು ಹಿಂದಿಯನ್ನು ಪ್ರೀತಿಸುತ್ತೇವೆ ಮತ್ತು ಗೌರವಿಸುತ್ತೇವೆ. ಆದರೆ ಹಿಂದಿ ಹೇರಿಕೆಯನ್ನು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಎಂದು ಗುಡುಗಿದ್ದಾರೆ.
ಲೋಕಸಭೆಯ ಶೂನ್ಯ ವೇಳೆಯಲ್ಲಿ ಮಾತನಾಡಿದ ಸುಮಲತಾ, ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಗೆ ಕೇಂದ್ರ ಸರ್ಕಾರ ಶಾಸ್ತ್ರೀಯ ಸ್ಥಾನಮಾನ ನೀಡಿದೆ. ಹೀಗಾಗಿ ಹಿಂದಿ ಮಾದರಿಯಲ್ಲಿಯೇ ಕನ್ನಡ ಭಾಷೆಗೂ ಸಹ ಪ್ರಾಮುಖ್ಯತೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಬ್ಯಾಂಕುಗಳು ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಲ್ಲಿ ಹೊರ ರಾಜ್ಯದವರು ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರಿಗೆ ಕನ್ನಡ ಬಾರದ ಕಾರಣ ಕರ್ನಾಟಕದ ಜನತೆಗೆ ಸರ್ಕಾರದ ಯೋಜನೆಗಳ ಕುರಿತು ತಿಳಿಯುತ್ತಿಲ್ಲ ಎಂದು ಹೇಳಿದ ಸುಮಲತಾ, ಪ್ರಾದೇಶಿಕ ಭಾಷೆಗಳ ಮೇಲೆ ಹಿಂದಿ ಹೇರುವುದಕ್ಕೆ ನನ್ನ ವಿರೋಧವಿದೆ ಎಂದಿದ್ದಾರೆ.