ದೇಶದಲ್ಲಿ ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಇಂದು ಎಲೆಕ್ಟ್ರಿಕ್ ಬೈಕ್ನಲ್ಲಿ ಸಾಗುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಎಲೆಕ್ಟ್ರಿಕ್ ಬೈಕ್ ಸವಾರಿ ಮಾಡುತ್ತಿದ್ದ ರಾಜ್ಯ ಸಚಿವ ಹಾಗೂ ಕೋಲ್ಕತ್ತಾ ಮೇಯರ್ ಫಿರ್ಹಾದ್ ಹಕೀಮ್ ಅವರ ಹಿಂದೆ ಕೂತು ಮಮತಾ ಬ್ಯಾನರ್ಜಿ ಬೈಕ್ ಸವಾರಿ ಮಾಡಿದ್ದಾರೆ.
ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಮೈಮೇಲೆ ಬ್ಯಾನರ್ ಒಂದನ್ನ ಹಾಕಿಕೊಂಡಿದ್ದ ಮಮತಾ ಬ್ಯಾನರ್ಜಿ ಹೆಲ್ಮೆಟ್ ಧರಿಸಿ ಹಜ್ರಾ ಮೋರ್ನಿಂದ 5 ಕಿಲೋಮೀಟರ್ ಉದ್ದದ ಪ್ರಯಾಣ ನಡೆಸಿದ್ರು. ಈ ವೇಳೆ ರಸ್ತೆಯ ಎರಡೂ ಬದಿಯಲ್ಲಿ ಸಾರ್ವಜನಿಕರು ಜಮಾಯಿಸಿರೋದನ್ನ ಕಾಣಬಹುದಾಗಿದೆ.
ಇನ್ನು ಇದೇ ವೇಳೆ ಮಾತನಾಡಿದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಮೋದಿ ಸರ್ಕಾರ ಬಿಎಸ್ಎನ್ಎಲ್ನಿಂದ ಕಲ್ಲಿದ್ದಿಲಿನವರೆಗೆ ಎಲ್ಲವನ್ನೂ ಮಾರಾಟ ಮಾಡುತ್ತಿದೆ. ಇದು ಜನ ವಿರೋಧಿ, ರೈತ ವಿರೋಧಿ ಹಾಗೂ ಯುವ ವಿರೋಧಿ ಸರ್ಕಾರ ಎಂದು ಕಿಡಿಕಾರಿದ್ರು.