alex Certify ಮಾಜಿ ಸಿಎಂ ಜಯಲಲಿತಾ ಆಪ್ತೆ ಶಶಿಕಲಾಗೆ ಬಿಗ್ ಶಾಕ್: ಬರೋಬ್ಬರಿ 2 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸಿಎಂ ಜಯಲಲಿತಾ ಆಪ್ತೆ ಶಶಿಕಲಾಗೆ ಬಿಗ್ ಶಾಕ್: ಬರೋಬ್ಬರಿ 2 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ಆಪ್ತೆ ಶಶಿಕಲಾಗೆ ಸೇರಿದ ಬರೋಬ್ಬರಿ 2000 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಐಟಿ ಇಲಾಖೆ ಜಪ್ತಿ ಮಾಡಿದೆ.

ಆದಾಯ ತೆರಿಗೆ ಇಲಾಖೆ ನೀಡಿರುವ ಮಾಹಿತಿಯಂತೆ ವಿ.ಕೆ. ಶಶಿಕಲಾಗೆ ಸೇರಿದ 300 ಕೋಟಿ ರೂಪಾಯಿ ಮೌಲ್ಯದ ಎರಡು ಆಸ್ತಿಗಳು ಸೇರಿ 2000 ಕೋಟಿ ರೂ. ಮೌಲ್ಯದ ಸಂಬಂಧಿತ ಆಸ್ತಿಗಳನ್ನು ಜಪ್ತಿ ಮಾಡಲಾಗಿದೆ.

ಶಶಿಕಲಾ, ಇಳವರಸಿ, ಸುಧಾಕರನ್ ಹೆಸರಿನಲ್ಲಿ ಕೊಡನಾಡ್, ಸಿರುಥಾವೂರ್ ಪ್ರದೇಶದಲ್ಲಿ ಅಕ್ರಮ ಆಸ್ತಿ ಸಂಪಾದಿಸಿದ್ದು, 2000 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಜಪ್ತಿ ಮಾಡಿರುವುದಾಗಿ ಆದಾಯ ತೆರಿಗೆ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...