
ನವದೆಹಲಿ: ಪಾಕಿಸ್ತಾನದೊಂದಿಗಿನ ರಾಜತಾಂತ್ರಿಕ ಸಂಬಂಧವನ್ನು ಗಣನೀಯ ಪ್ರಮಾಣದಲ್ಲಿ ತಗ್ಗಿಸಲು ಭಾರತ ಸರ್ಕಾರ ಮುಂದಾಗಿದೆ.
ಭಾರತದಲ್ಲಿರುವ ಪಾಕಿಸ್ತಾನ ಹೈಕಮಿಷನ್ ಕಚೇರಿಯ ಸಿಬ್ಬಂದಿಯನ್ನು ಅರ್ಧದಷ್ಟು ಕಡಿತ ಮಾಡಲು ಸೂಚನೆ ನೀಡಲಾಗಿದೆ. ಪಾಕಿಸ್ತಾನದಲ್ಲಿರುವ ಭಾರತದ ಹೈಕಮಿಷನ್ ಕಚೇರಿ ಸಿಬ್ಬಂದಿ ಸಂಖ್ಯೆಯನ್ನು ಕೂಡ ಅರ್ಧದಷ್ಟು ಕಡಿತ ಮಾಡಲು ತಿಳಿಸಲಾಗಿದೆ.
ಪಾಕ್ ಹೈಕಮಿಷನ್ ನಲ್ಲಿ ಇರುವ ಅಧಿಕಾರಿಗಳು ಗೂಢಚರ್ಯೆಯಲ್ಲಿ ತೊಡಗಿದ್ದಾರೆ. ಅಲ್ಲದೇ, ಭಯೋತ್ಪಾದಕ ಸಂಘಟನೆಗಳೊಂದಿಗೆ ನಂಟು ಹೊಂದಿದ್ದಾರೆ ಎನ್ನುವ ಮಾಹಿತಿಗಳ ಹಿನ್ನೆಲೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದಿಂದ ಪಾಕಿಸ್ತಾನ ಹೈಕಮಿಷನ್ ಮುಖ್ಯಸ್ಥರನ್ನು ಕರೆಸಿ ಈ ಸೂಚನೆ ನೀಡಲಾಗಿದೆ.