ಫ್ರಾನ್ಸ್ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನ ಪ್ರಧಾನಿ ಮೋದಿ ತೀವ್ರವಾಗಿ ಖಂಡಿಸಿದ್ದಾರೆ. ಹಾಗೂ ಭಯೋತ್ಪಾದನೆ ವಿರುದ್ಧದ ಫ್ರಾನ್ಸ್ನ ಹೋರಾಟಕ್ಕೆ ಭಾರತ ಬೆಂಬಲ ನೀಡುತ್ತದೆ ಎಂದು ಹೇಳಿದ್ದಾರೆ.
ನೈಸ್ ನಗರದಲ್ಲಿರುವ ಚರ್ಚ್ನಲ್ಲಿ ಶಸ್ತ್ರಸಜ್ಜಿತ ದಾಳಿಕೋರರು ಚಾಕುವಿನಿಂದ ಮೂವರನ್ನ ಹತ್ಯೆಗೈದಿದ್ದರು. ಈ ವಿಚಾರವಾಗಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಫ್ರಾನ್ಸ್ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನ ನಾನು ಬಲವಾಗಿ ಖಂಡಿಸುತ್ತೇನೆ.
ಭಯೋತ್ಪಾದಕ ದಾಳಿಯಲ್ಲಿ ಹತರಾದ ಕುಟುಂಬಸ್ಥರಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ. ಭಯೋತ್ಪಾದನೆ ವಿರುದ್ಧದ ಫ್ರಾನ್ಸ್ನ ಹೋರಾಟದಲ್ಲಿ ಭಾರತ ಜೊತೆಗಿದೆ ಅಂತಾ ಟ್ವೀಟಾಯಿಸಿದ್ದಾರೆ.