
ಹಿಮಾಲಯದ ದುರ್ಗಮ ಪ್ರದೇಶದಲ್ಲಿ ಸಿಗುವ ವಯಾಗ್ರಕ್ಕೆ ಹೆಚ್ಚಿನ ಬೇಡಿಕೆಯಿದೆ. ವಯಾಗ್ರ 20 ಲಕ್ಷ ರೂಪಾಯಿಗೆ ಮಾರಾಟವಾಗುತ್ತದೆ. ಈ ವಯಾಗ್ರ ಖರೀದಿ ಮಾಡುವವರಿಗೊಂದು ಸುದ್ದಿಯಿದೆ. ಇಂಟರ್ನ್ಯಾಷನಲ್ ಯೂನಿಯನ್ ಫಾರ್ ಕನ್ಸರ್ವೇಶನ್ ಆಫ್ ನೇಚರ್ (ಐಯುಸಿಎನ್) ಅಳಿವಿನಂಚಿನಲ್ಲಿರುವ ಪ್ರಭೇದಗಳ ಕೆಂಪು ಪಟ್ಟಿಯಲ್ಲಿ ಇದನ್ನು ಸೇರಿಸಿದೆ.
ಜುಲೈ 9 ರಂದು ಬಿಡುಗಡೆಯಾದ ಈ ಪಟ್ಟಿಯಲ್ಲಿ, ಈ ಸಸ್ಯವು ದೊಡ್ಡ ಅಪಾಯದಲ್ಲಿದೆ ಎಂದು ಹೇಳಲಾಗಿದೆ. ‘ಹಿಮಾಲಯನ್ ವಯಾಗ್ರ’ ಹೆಸರಿನ ಈ ಶಿಲೀಂಧ್ರವನ್ನು ಲೈಂಗಿಕ ಪ್ರಚೋದನೆಯನ್ನು ಹೆಚ್ಚಿಸಲು ಬಳಸಲಾಗುತ್ತದೆ.
ಈ ಸಸ್ಯವನ್ನು ಸ್ಥಳೀಯ ಮಾರುಕಟ್ಟೆಯಲ್ಲಿ ಪ್ರತಿ ಕೆಜಿಗೆ ಸುಮಾರು 10 ಲಕ್ಷ ರೂಪಾಯಿ ದರದಲ್ಲಿ ಮಾರಾಟ ಮಾಡಲಾಗುತ್ತದೆ. ಚೀನಾದಲ್ಲಿ ಇದಕ್ಕೆ ಹೆಚ್ಚಿನ ಬೇಡಿಕೆಯಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಬೆಲೆ 20 ಲಕ್ಷ ರೂಪಾಯಿಯಿದೆ.
ಕಳೆದ 15 ವರ್ಷಗಳಲ್ಲಿ ಈ ಮೂಲಿಕೆಯ ವಿಸ್ತೀರ್ಣ 30 ಪ್ರತಿಶತದಷ್ಟು ಕಡಿಮೆಯಾಗಿದೆ ಎಂದು ಐಯುಸಿಎನ್ ಹೇಳಿದೆ