ಆಂಧ್ರದಲ್ಲಿ ವೈ.ಎಸ್. ರಾಜಶೇಖರ ರೆಡ್ಡಿ ಅವರ ಪುತ್ರ ವೈ.ಎಸ್. ಜಗನ್ ಮೋಹನ್ ರೆಡ್ಡಿ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇದೀಗ ಅವರ ಸಹೋದರಿ ವೈ.ಎಸ್. ಶರ್ಮಿಳಾ ರೆಡ್ಡಿ ನೆರೆಯ ತೆಲಂಗಾಣ ರಾಜ್ಯದ ಮೇಲೆ ಕಣ್ಣಿಟ್ಟಿದ್ದಾರೆ.
ಈ ಹಿನ್ನೆಲೆಯಲ್ಲಿ ಶರ್ಮಿಳಾ ರೆಡ್ಡಿ ಹೊಸ ಪಕ್ಷ ಸ್ಥಾಪಿಸುವ ಕುರಿತಂತೆ ಘೋಷಣೆ ಮಾಡಿದ್ದು, ಅವರ ತಾಯಿ ವಿಜಯಲಕ್ಷ್ಮಿ ಸಹ ಈ ವಿಷಯವನ್ನು ಖಚಿತಪಡಿಸಿದ್ದಾರೆ.
ಬಿಜೆಪಿ ವರಿಷ್ಠರಿಗೇ ಸೆಡ್ಡು ಹೊಡೆದ ಬಸನಗೌಡ ಪಾಟೀಲ್ ಯತ್ನಾಳ್
ಶರ್ಮಿಳಾ ರೆಡ್ಡಿ ಅವರ ಹೊಸ ಪಕ್ಷಕ್ಕೆ ಅವರ ತಂದೆ ಡಾ. ವೈ.ಎಸ್. ರಾಜಶೇಖರ್ ರೆಡ್ಡಿ ಅವರ ಜನ್ಮದಿನದ ಅಂಗವಾಗಿ ಜುಲೈ 8ರಂದು ತೆಲಂಗಾಣದಲ್ಲಿ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಚಾಲನೆ ಸಿಗಲಿದ್ದು, ಅಂದು ಹೊಸ ಪಕ್ಷದ ಹೆಸರು ಮತ್ತು ಹೊಸ ಲಾಂಛನ ಘೋಷಣೆಯಾಗಲಿದೆ.