ಮುಂಬೈ: ಜೈಲಿನಲ್ಲಿರುವ ಖ್ಯಾತ ಹೋರಾಟಗಾರ ಮತ್ತು ಕ್ರಾಂತಿಕಾರಿ ವರವರರಾವ್ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.
ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಜೈಲಿನಲ್ಲಿದ್ದು ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೊರೋನಾ ಪಾಸಿಟಿವ್ ವರದಿ ಬಂದಿದೆ.
ಅವರಿಗೆ ಕೊರೊನಾ ಸೋಂಕಿನ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ. ಆರೋಗ್ಯ ಸ್ಥಿರವಾಗಿದೆ. ಅವರು ಕೋವಿಡ್ ಅಲ್ಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ ಅವರನ್ನು ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗುವುದು ಎಂದು ಜೆಜೆ ಆಸ್ಪತ್ರೆಯ ಡೀನ್ ಡಾ. ರಂಜಿತ್ ಮಾಂಕೇಶ್ವರ್ ತಿಳಿಸಿದ್ದಾರೆ.
80 ವರ್ಷದ ವರವರ ರಾವ್ ಎರಡು ವರ್ಷಗಳಿಂದ ನವಿ ಮುಂಬೈನ ತಾಲೋಜ ಜೈಲಿನಲ್ಲಿದ್ದಾರೆ. ಅವರ ಆರೋಗ್ಯ ಕ್ಷೀಣಿಸುತ್ತಿದೆ ಎಂದು ಅವರ ಕುಟುಂಬದವರು ಆತಂಕದಲ್ಲಿದ್ದಾರೆ. ಅವರಿಗೆ ವೈದ್ಯಕೀಯ ಸೌಲಭ್ಯ ಒದಗಿಸಬೇಕೆಂದು ಜೈಲು ಅಧಿಕಾರಿಗಳಿಗೆ ಕುಟುಂಬದವರು ಒತ್ತಾಯಿಸಿದ್ದು,. ಆಸ್ಪತ್ರೆಗೆ ದಾಖಲಿಸಿದ ನಂತರದಲ್ಲಿ ಅವರಿಗೆ ಕೊರೋನಾ ಸೋಂಕು ತಗುಲಿರುವುದು ಗೊತ್ತಾಗಿದೆ ಎಂದು ಹೇಳಲಾಗಿದೆ.