
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಪ್ರದೇಶದಲ್ಲಿ ಮಂಗಳವಾರ ಬೆಳಗಿನ ಜಾವ ಭದ್ರತಾಪಡೆಗಳ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿದೆ.
ಕಾರ್ಯಾಚರಣೆಯಲ್ಲಿ ಸಿಆರ್ಪಿಎಫ್ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಸೋಮವಾರ ಅನಂತನಾಗ್ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿತ್ತು ಅರಣ್ಯ ಪ್ರದೇಶದಲ್ಲಿ ಉಗ್ರರು ಅವಿತಿರುವ ಮಾಹಿತಿ ಪಡೆದ ಭದ್ರತಾಪಡೆಗಳು ಶೋಧ ಕಾರ್ಯ ಕೈಗೊಂಡಿದ್ದಾರೆ.
ಪುಲ್ವಾಮಾದ ಬಾಂಡ್ ಜೋ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಬೆಳಗಿನಜಾವ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ. ಉಗ್ರರ ಸದೆಬಡಿಯಲು ಕಾರ್ಯಾಚರಣೆ ಮುಂದುವರೆಸಲಾಗಿದೆ.