alex Certify ಬೆಳ್ಳಂಬೆಳಗ್ಗೆ ಭದ್ರತಾ ಪಡೆಗಳಿಂದ ಭರ್ಜರಿ ಬೇಟೆ, ಮೂವರು ಭಯೋತ್ಪಾದಕರು ಫಿನಿಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳ್ಳಂಬೆಳಗ್ಗೆ ಭದ್ರತಾ ಪಡೆಗಳಿಂದ ಭರ್ಜರಿ ಬೇಟೆ, ಮೂವರು ಭಯೋತ್ಪಾದಕರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು ಎನ್ ಕೌಂಟರ್ ನಲ್ಲಿ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ.

ನಾಗ್ ನಾಡ್ ಚಿಮ್ಮೇರ್ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ ನಡೆದ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭಾರತೀಯ ಸೇನೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಹೇಳಲಾಗಿದೆ.

ನಾಗ್ ನಾಡ್ ಪ್ರದೇಶದಲ್ಲಿ ಭಯೋತ್ಪಾದಕರು ಅವಿತಿರುವ ಮಾಹಿತಿ ಪಡೆದ ಭದ್ರತಾ ಪಡೆಯ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿದ್ದು ಈ ವೇಳೆ ತಲೆಮರೆಸಿಕೊಂಡ ಉಗ್ರರು ಗುಂಡು ಹಾರಿಸಿದ್ದಾರೆ. ಶೋಧ ಕಾರ್ಯಾಚರಣೆ ಎನ್ ಕೌಂಟರ್ ಆಗಿ ಬದಲಾಗಿದೆ. ಹತ್ಯೆಗೀಡಾದ ಉಗ್ರರ ಬಳಿಯಿದ್ದ ಅಪಾರ ಪ್ರಮಾಣದ ಶಶ್ತ್ರಾಸ್ತ್ರ, ಮದ್ದುಗುಂಡುಗಳನ್ನು ವಶಕ್ಕೆ ಪಡೆದಿದ್ದು, ಮೃತರ ಗುರುತು ಮತ್ತು ಗುಂಪು ಪತ್ತೆ ಕಾರ್ಯ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...