ಭಾರತ ಸೇರಿದಂತೆ ವಿಶ್ವದ ವಿವಿಧ ವಿಶ್ವವಿದ್ಯಾಲಯಗಳ 150 ಕ್ಕೂ ಹೆಚ್ಚು ಶಿಕ್ಷಣ ತಜ್ಞರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಗಳಲ್ಲಿ ಮತ್ತಷ್ಟು ವಿಳಂಬವಾದರೆ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಇದು ಪರಿಣಾಮ ಬೀರುತ್ತದೆ ಎಂದು ಅವರು ಹೇಳಿದ್ದಾರೆ.
ಹೆಚ್ಚುತ್ತಿರುವ ಕೊರೊನಾ ಸೋಂಕಿನಿಂದಾಗಿ ಸೆಪ್ಟೆಂಬರ್‌ನಲ್ಲಿ ನಡೆಯಬೇಕಿದ್ದ ಜೆಇಇ ಮತ್ತು ನೀಟ್ ಪರೀಕ್ಷೆ ವಿರುದ್ಧ ಆರೋಪ ಕೇಳಿ ಬಂದಿದೆ. ಪರೀಕ್ಷೆ ಮುಂದೂಡುವಂತೆ ಅನೇಕರು ಹೇಳ್ತಿದ್ದಾರೆ. ಈ ಪ್ರತಿಭಟನೆಯನ್ನು ತಜ್ಞರು ಉಲ್ಲೇಖಿಸಿದ್ದಾರೆ. ಕೆಲವರು ಇದ್ರಲ್ಲಿ ರಾಜಕೀಯ ಮಾಡ್ತಿದ್ದಾರೆ. ಹೆಚ್ಚಿನ ಜನರು ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುತ್ತಿದ್ದಾರೆಂದು ತಜ್ಞರು ಪತ್ರದಲ್ಲಿ ಹೇಳಿದ್ದಾರೆ.
ಯುವಕರು, ವಿದ್ಯಾರ್ಥಿಗಳು ರಾಷ್ಟ್ರದ ಭವಿಷ್ಯ. ಆದ್ರೆ ಕೊರೊನಾ ಕಾರಣಕ್ಕೆ ಅವ್ರ ಭವಿಷ್ಯ ಅನಿಶ್ಚಿತತೆಯಿಂದ ಕೂಡಿದೆ. ಪರೀಕ್ಷೆ ನಡೆಯುವ ಬಗ್ಗೆ ಅವ್ರಲ್ಲಿ ಆತಂಕವಿದೆ.ಇದಕ್ಕೆ ಶೀಘ್ರವೇ ಪರಿಹಾರ ನೀಡಬೇಕೆಂದು ಪತ್ರದಲ್ಲಿ ಹೇಳಲಾಗಿದೆ.