alex Certify ಯುವತಿಗೆ ಕಿರುಕುಳ: ದೂರು ನೀಡಿದ ಪತ್ರಕರ್ತ ಗುಂಡಿನ ದಾಳಿಯಲ್ಲಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯುವತಿಗೆ ಕಿರುಕುಳ: ದೂರು ನೀಡಿದ ಪತ್ರಕರ್ತ ಗುಂಡಿನ ದಾಳಿಯಲ್ಲಿ ಸಾವು

ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ದುಷ್ಕರ್ಮಿಗಳ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ಪತ್ರಕರ್ತ ವಿಕ್ರಂ ಜೋಶಿ ಮೃತಪಟ್ಟಿದ್ದಾರೆ.

ಸೊಸೆ, ಸೋದರ ಸಂಬಂಧಿ ಯುವತಿಗೆ ಕಿರುಕುಳ ನೀಡುತ್ತಿರುವ ಕಿಡಿಗೇಡಿಗಳ ವಿರುದ್ಧ ಅವರು ದೂರು ನೀಡಿದ್ದ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಗಾಜಿಯಾಬಾದ್ ವಿಜಯ್ ನಗರ್ ಪ್ರದೇಶದಲ್ಲಿ ಚಿಕ್ಕಮಕ್ಕಳ ಎದುರಲ್ಲೇ ವಿಕ್ರಂ ಜೋಶಿ ಅವರ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದರು.

ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿದ್ದ ವಿಕ್ರಂ ಜೋಶಿ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ವಿಕ್ರಂ ಜೋಶಿ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು 9 ಆರೋಪಿಗಳನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...