
ಚನ್ನೈ: ಕಲ್ಲುಕುರುಚಿಯಲ್ಲಿ ನಡೆದಿದ್ದ ಕಳ್ಳಭಟ್ಟಿ ಸಾರಾಯಿ ಸೇವನೆ ಪ್ರಕರಣದಲ್ಲಿ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈವರೆಗೆ 54 ಜನರು ಮೃತಪಟ್ತಿದ್ದಾರೆ.
ತಮಿಳುನಡಿನ ಕಲ್ಲುಕುರಿಚಿಯಲ್ಲಿ ಕಳ್ಳಭಟ್ಟಿ ಮದ್ಯ ಸೇವಿಸಿ ಮಹಿಳೆಯರು ಸೇರಿದಂತೆ 54 ಜನರು ಸಾವನ್ನಪ್ಪಿದ್ದಾರೆ. 10 ಜನರು ಕಣ್ಣು ಕಳೆದುಕೊಂಡಿದ್ದಾರೆ.
100ಕ್ಕೂ ಹೆಚ್ಚು ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಅವರಲ್ಲಿ 15ಕ್ಕೂ ಹೆಚ್ಚು ಜನರ ಸ್ಥಿತಿ ಚಿಂತಾಜನಕವಾಗಿದೆ. ಸಾವಿನ ಸಂಖ್ಯೆ ಇನ್ನಷ್ಟು ಏರುವ ಸಾಧ್ಯತೆ ಇದೆ. ಈ ನಡುವೆ ಪ್ರಕರಣವನ್ನು ಸಿಎಂ ಎಂ.ಕೆ.ಸ್ಟಾಲಿನ್ ನೇತೃತ್ವದ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ.