
ಭೋಪಾಲ್: ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಪಕ್ಷದ ನಾಯಕ ಕಮಲ್ ನಾಥ್ ಅವರಿಗೆ ಚುನಾವಣಾ ಪ್ರಚಾರ ನಡೆಸಲು ಆಯೋಗ ನಿರ್ಬಂಧಿಸಿದೆ.
ಕಮಲ್ ನಾಥ್ ಅವರು ಸತತವಾಗಿ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಆಯೋಗ ಕ್ರಮ ಕೈಗೊಂಡಿದ್ದು ಸ್ಟಾರ್ ಪ್ರಚಾರಕರ ಪಟ್ಟಿ ಪಟ್ಟಿಯಿಂದ ಅವರನ್ನು ಕೈಬಿಡಲಾಗಿದೆ.
ಒಂದು ವೇಳೆ ಅವರು ಚುನಾವಣೆ ಪ್ರಚಾರದಲ್ಲಿ ಭಾಗಿಯಾದಲ್ಲಿ ಆ ಕ್ಷೇತ್ರದ ಅಭ್ಯರ್ಥಿಗೆ ಕಮಲ್ ನಾಥ್ ಚುನಾವಣಾ ಪ್ರಚಾರದ ಎಲ್ಲಾ ವೆಚ್ಚವನ್ನು ಸೇರಿಸಬೇಕಾಗುತ್ತದೆ ಎಂದು ಚುನಾವಣಾ ಆಯೋಗ ಹೇಳಿದೆ.