
ಬೆಂಗಳೂರು: ರಾಜಧಾನಿ ಬೆಂಗಳೂರು ಬಿಸಿನೆಸ್ ಕಾರಿಡರ್ ರೂಪಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಬಜೆಟ್ ಮಂಡನೆ ವೇಳೆ ಬೆಂಗಳೂರು ಬಿಸಿನೆಸ್ ಕಾರಿಡರ್ ರೂಪಿಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿ 27 ಸಾವಿರ ಕೋಟಿ ವೆಚ್ಚವಾಗಲಿದೆ. 73 ಕೀ.ಮೀ ಉದ್ದ ರಸ್ತೆ ನಿರ್ಮಿಸಲಾಗುವುದು ಎಂದರು.
ಇದಕ್ಕಾಗಿ ಪಿಪಿಪಿ ಮಾದರಿಯಲ್ಲಿ ಆರ್ ಎಫ್ ಪಿ ಕರೆಯಲಾಗುವುದು. ಬೆಂಗಳೂರಿನಲ್ಲಿ 250 ಮೀಟರ್ ಎತ್ತರದ ಸ್ಕೈಡೆಕ್ ನಿರ್ಮಾಣ ಮಾಡಲಾಗುವುದು. ಬೆಂಗಳೂರಿನಲ್ಲಿ ಆಕರ್ಷಕ ಪ್ರವಾಸಿ ತಾಣ ನಿರ್ಮಿಸಲು ಯೋಜನೆ ರೂಪಿಸಲಾಗುವುದು ಎಂದು ತಿಳಿಸಿದರು.