alex Certify ಬಿಗ್ ಶಾಕಿಂಗ್: ಕೊರೋನಾ ಸೋಂಕಿತೆ ಮೇಲೆ ಆಂಬುಲೆನ್ಸ್ ಚಾಲಕನಿಂದಲೇ ಲೈಂಗಿಕ ದೌರ್ಜನ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ಶಾಕಿಂಗ್: ಕೊರೋನಾ ಸೋಂಕಿತೆ ಮೇಲೆ ಆಂಬುಲೆನ್ಸ್ ಚಾಲಕನಿಂದಲೇ ಲೈಂಗಿಕ ದೌರ್ಜನ್ಯ

ಕೇರಳದ ಪಟ್ಟಣಂತಿಟ್ಟ ಜಿಲ್ಲೆಯಲ್ಲಿ 19 ವರ್ಷದ ಕೊರೋನಾ ಸೋಂಕಿತೆ ಮೇಲೆ ಅಂಬುಲೆನ್ಸ್ ಚಾಲಕ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಶನಿವಾರ ರಾತ್ರಿ ವೃದ್ಧೆ ಮತ್ತು ಸಂತ್ರಸ್ತೆಯನ್ನು ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಅಂಬುಲೆನ್ಸ್ ಚಾಲಕ ಇಂತಹ ಕೃತ್ಯವೆಸಗಿದ್ದಾನೆ. ಆರೋಪಿಯನ್ನು 25 ವರ್ಷದ ನೌಫಲ್ ಎಂದು ಗುರುತಿಸಲಾಗಿದೆ. ಆರೋಪಿ ಕೋವಿಡ್ ಕೇರ್ ಸೆಂಟರ್ ಗೆ ತೆರಳುವ ಮಾರ್ಗ ಮಧ್ಯೆ ಅರನ್ಮೂಲಾ ವಿಮಾನ ನಿಲ್ದಾಣದ ಬಳಿಯಿರುವ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ದೂರು ನೀಡಲಾಗಿದೆ.

ಅತ್ಯಾಚಾರದ ನಂತರ ಆರೋಪಿ ಸೋಂಕಿತೆಯನ್ನು ಕೋವಿಡ್ ಕೇರ್ ಕೇಂದ್ರಕ್ಕೆ ಬಿಟ್ಟಿದ್ದಾನೆ. ಪಂಡಲಂನಲ್ಲಿರುವ ಸಂಬಂಧಿಕರ ಮನೆಯಲ್ಲಿದ್ದ ಯುವತಿಗೆ ಶನಿವಾರ ಕೊರೋನಾ ಪಾಸಿಟಿವ್ ವರದಿ ಬಂದಿತ್ತು. ಆಕೆಯನ್ನು ಆಂಬುಲೆನ್ಸ್ ನಲ್ಲಿ ಕರೆದೊಯ್ಯುವ ವೇಳೆ ಆರೋಪಿ ಇಂತಹ ಕೃತ್ಯವೆಸಗಿದ್ದಾನೆ. ಭಾನುವಾರ ಆರೋಪಿಯನ್ನು ಬಂಧಿಸಲಾಗಿದೆ. ಕೇರಳ ಆರೋಗ್ಯ ಸಚಿವರಾದ ಕೆ.ಕೆ. ಶೈಲಜಾ ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿದ್ದು, ಚಾಲಕನ ವಿರುದ್ಧ ಕ್ರಮಕ್ಕೆ ನಿರ್ದೇಶನ ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...