ಕೇರಳ ರಾಜಕೀಯದಲ್ಲಿ ಸಂಚಲನ ಮೂಡಿಸಿದ 15 ಕೋಟಿ ರೂಪಾಯಿ ಬೆಲೆಯ 30 ಕೆಜಿ ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಅವರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.
ರಾಷ್ಟ್ರೀಯ ತನಿಖಾ ದಳದ(NIA) ಪೊಲೀಸರು ಬೆಂಗಳೂರಿನಲ್ಲಿ ಸ್ವಪ್ನಾ ಸುರೇಶ್ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ತಿರುವನಂತಪುರದಲ್ಲಿ ಕಠಿಣ ಲಾಕ್ಡೌನ್ ಜಾರಿಯಲ್ಲಿದ್ದು ಸ್ವಪ್ನಾ ಕುಟುಂಬ ಸಮೇತ ಬೆಂಗಳೂರಿಗೆ ಆಗಮಿಸಿ ಹೋಟೆಲೊಂದರಲ್ಲಿ ವಾಸ್ತವ್ಯ ಹೂಡಿದ್ದರು.
ಆಕೆಯೊಂದಿಗೆ ಸಂಪರ್ಕದಲ್ಲಿದ್ದ 15 ಕ್ಕೂ ಹೆಚ್ಚು ದೂರವಾಣಿಗಳ ಮೇಲೆ ನಿಗಾ ವಹಿಸಿದ ಎನ್.ಐ.ಎ. ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿ ಬೆಂಗಳೂರಿನಲ್ಲಿ ಬಂಧಿಸಿದೆ. ಪ್ರಕರಣದ 4ನೇ ಆರೋಪಿಯಾಗಿರುವ ಸಂದೀಪ್ ನಾಯರ್ ನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದ್ದು, ಇಂದು ಕೊಚ್ಚಿಗೆ ಕರೆದೊಯ್ದು ನ್ಯಾಯಾಧೀಶರ ಎದುರು ಹಾಜರುಪಡಿಸಲಾಗುವುದು ಎನ್ನಲಾಗಿದೆ.