ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ರಕ್ಷಾ ಬಂಧನ ಕಾರ್ಯಕ್ರಮವನ್ನು ಆಚರಿಸದಂತೆ ಕೇರಳ ಸರ್ಕಾರದಿಂದ ಆದೇಶ ಹೊರಡಿಸಿದ್ದು, ಈ ಕುರಿತಂತೆ ವೈದ್ಯಕೀಯ ಶಿಕ್ಷಣ ಮಂಡಳಿ ನಿರ್ದೇಶಕಿ ಡಾ. ರಾಮ್ಲಾ ಬೀವಿ ಸುತ್ತೋಲೆ ಕಳುಹಿಸಿದ್ದಾರೆ.
ಕಳೆದ ವರ್ಷ ರಕ್ಷಾ ಬಂಧನ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಸರ್ಕಾರಿ ಕಾಲೇಜುಗಳಲ್ಲಿ ಅನುಮತಿ ಪಡೆಯದೆ ರಕ್ಷಾ ಬಂಧನ ಆಚರಿಸಿದ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಮುಂದಾಗಲಾಗಿದೆ.
ಯಾವುದೇ ಒಂದು ಧರ್ಮಕ್ಕೆ ಸೀಮಿತವಾದ ಆಚರಣೆಯನ್ನು ಕಾಲೇಜುಗಳಲ್ಲಿ ಆಚರಿಸಲಾಗುವುದಿಲ್ಲ. ಹೀಗಾಗಿ ಕಳೆದ ವರ್ಷ ನಡೆದ ಘಟನೆ ಮರುಕಳಿಸದಂತೆ ತಡೆಯಲು ಈ ಸುತ್ತೋಲೆ ಹೊರಡಿಸಲಾಗಿದೆ ಎಂದು ತಿಳಿಸಲಾಗಿದೆ.