ತಿರುವನಂತಪುರಂ: ಕೇರಳದಲ್ಲಿ ಮತ್ತೊಬ್ಬ ಕೊರೊನಾ ಸೋಂಕಿತೆ ಮೇಲೆ ಅತ್ಯಾಚಾರ ನಡೆದಿದೆ. ಇತ್ತೀಚೆಗಷ್ಟೇ ಕೊರೊನಾ ಸೋಂಕಿತೆ ಮೇಲೆ ಆಂಬುಲೆನ್ಸ್ ಚಾಲಕ ಅತ್ಯಾಚಾರ ಎಸಗಿದ್ದ.
ಈಗ ವೈದ್ಯಾಧಿಕಾರಿಯೊಬ್ಬರು ಆರೋಗ್ಯ ತಪಾಸಣೆಯ ದೃಢೀಕರಣ ಪತ್ರ ತರಲು ಹೋಗಿದ್ದ ಸೋಂಕಿತೆ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ದೂರು ನೀಡಿದ್ದು ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ವೈದ್ಯಾಧಿಕಾರಿಯನ್ನು ಬಂಧಿಸಲಾಗಿದೆ.
ಪಟ್ಟಣಂತಿಟ್ಟ ಜಿಲ್ಲೆಯ ಆಂಬುಲೆನ್ಸ್ ಚಾಲಕ ಕೊರೋನಾ ಸೋಂಕಿತ ಯುವತಿ ಮೇಲೆ ಅತ್ಯಾಚಾರ ಎಸಗಿದ್ದು, ಆತನನ್ನು ಬಂಧಿಸಲಾಗಿತ್ತು.