ಕೇರಳದ ತಿರುವನಂತಪುರಂ ಸಮೀಪದ ಕದಿಲಾಂಕ್ಕುಲಂ ಬಳಿ ಆಘಾತಕಾರಿ ಘಟನೆ ನಡೆದಿದೆ. ಮಹಿಳೆಗೆ ಬಲವಂತವಾಗಿ ಮದ್ಯ ಕುಡಿಸಿ ಗಂಡ ಮತ್ತು ಆತನ ನಾಲ್ವರು ಸ್ನೇಹಿತರು ಅತ್ಯಾಚಾರ ಎಸಗಿದ್ದಾರೆ.
ಮಹಿಳೆಯ 5 ವರ್ಷದ ಮಗನ ಎದುರಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಲ್ಲದೇ ಬಾಲಕನನ್ನು ಥಳಿಸಲಾಗಿದೆ. ಮಹಿಳೆ ಮತ್ತು ಆಕೆಯ ಇಬ್ಬರು ಮಕ್ಕಳನ್ನು ಗಂಡ ಬೀಚ್ ನೋಡಲು ಕರೆದುಕೊಂಡು ಹೋಗಿದ್ದಾನೆ. ನಂತರ ಸ್ನೇಹಿತನ ಮನೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಬಲವಂತವಾಗಿ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.
25 ವರ್ಷದ ಮಹಿಳೆ ಈ ಕುರಿತಾಗಿ ಪೊಲೀಸರಿಗೆ ಹೇಳಿಕೆ ನೀಡಿದ್ದು ಕೇರಳ ರಾಜ್ಯ ಮಹಿಳಾ ಆಯೋಗ ಪ್ರಕರಣ ದಾಖಲಿಸಿ ತನಿಖೆ ಸೂಚಿಸಿದೆ. ರಸ್ತೆ ಬದಿಯಲ್ಲಿ ಬಿದ್ದಿದ್ದ ಮಹಿಳೆಯನ್ನು ಯುವಕನೊಬ್ಬ ಮನೆಗೆ ಕಳುಹಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಬಳಿಕ ಪೊಲೀಸರಿಂದ ಮಹಿಳೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದ್ದು, ಪರಿಶೀಲನೆ ನಡೆಸಲಾಗಿದೆ.