ಕೊರೊನಾ ಲಾಕ್‌ಡೌನ್ ನಿಯಮ ಉಲ್ಲಂಘಿಸಿದ ಆರೋಪದಲ್ಲಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಪುತ್ರ ತೇಜ್ ಪ್ರತಾಪ್ ಯಾದವ್ ವಿರುದ್ಧ ರಾಂಚಿಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಸ್ಥಾನಿಕ ಕ್ವಾರಂಟೈನ್ ಕೇಂದ್ರವಾಗಿದ್ದ ಹೊಟೇಲ್ ಒಂದರಲ್ಲಿ ಅನಧಿಕೃತವಾಗಿ ತೇಜ್ ಪ್ರತಾಪ್ ಯಾದವ್ ಉಳಿದುಕೊಂಡಿದ್ದರು. ಆದ್ದರಿಂದ ಕೊರೊನಾ ನಿಯಮವನ್ನು ಉಲ್ಲಂಘಿಸಿದ ಆರೋಪದಲ್ಲಿ ತೇಜ್ ಪ್ರತಾಪ್ ಹಾಗೂ ಹೊಟೇಲ್ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ರಾಂಚಿ ಸಬ್ ಡಿವಿಷನ್ ಮ್ಯಾಜಿಸ್ಟ್ರೇಟ್ ಲೊಕೇಶ್ ಮಿಶ್ರಾ ಸ್ಪಷ್ಟಪಡಿಸಿದ್ದಾರೆ.
ಬಿಹಾರದ ಮಾಜಿ ಆರೋಗ್ಯ ಸಚಿವರಾಗಿರುವ ತೇಜ್ ಪ್ರತಾಪ್ ಯಾದವ್ ಅವರು, ಕೆಲ್ಲಿ ಬಂಗ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲಾಲು ಪ್ರಸಾದ್ ಯಾದವ್ ಅವರನ್ನು ಭೇಟಿಯಾಗಲು ಹೋಗಿದ್ದರು. ಬಳಿಕ ರಾಂಚಿಯಲ್ಲಿ ಸ್ನೇಹಿತನನ್ನು ಭೇಟಿಯಾಗಿ ಹೊಟೇಲ್‌ನಲ್ಲಿ ಉಳಿದುಕೊಂಡಿದ್ದರು. ಈ ಸಮಯದಲ್ಲಿ ಯಾವುದೇ ಹೊಟೇಲ್‌ನಲ್ಲಿ ಉಳಿದುಕೊಳ್ಳಲು ಅವಕಾಶವಿಲ್ಲ. ಆದ್ದರಿಂದ ಎಫ್‌ಐಆರ್ ದಾಖಲಿಸಲಾಗಿದೆ.