ನವದೆಹಲಿ: ಲಾಕ್ಡೌನ್ ಸಡಿಲವಾದ ನಂತರ ಕೊರೊನಾ ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಹೊಸ ಗೈಡ್ ಲೈನ್ ನೀಡಲಾಗಿದೆ.
ಎರಡೂವರೆ ತಿಂಗಳ ನಂತರ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದ್ದು ಇದರೊಂದಿಗೆ ಕೊರೋನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ನೀಡಿದೆ.
ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿ ಅಜಯ್ ಬಲ್ಲಾ ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಕಟ್ಟುನಿಟ್ಟಿನ ನಿಷೇಧಾಜ್ಞೆಯನ್ನು ಜಾರಿ ಮಾಡುವಂತೆ ಸೂಚನೆ ನೀಡಿದ್ದಾರೆ. ಜನಸಂಚಾರವನ್ನು ಸಂಪೂರ್ಣವಾಗಿ ತಡೆಯಬೇಕು. ಅಗತ್ಯ ಸೇವೆ ಹೊರತುಪಡಿಸಿ ಅನಗತ್ಯ ಜನ ಸಂಚಾರಕ್ಕೆ ನಿರ್ಬಂಧ ಇರಬೇಕೆಂದು ಸೂಚನೆ ನೀಡಿದ್ದಾರೆ.