alex Certify ಲಾಕ್ ಡೌನ್ ಯಾವಾಗ ಮುಗಿಯುತ್ತೆ ಎಂಬ ನಿರೀಕ್ಷೆಯಲ್ಲಿದ್ದವರಿಗೆ ಕೊನೆಗೂ ‘ಸಿಹಿ ಸುದ್ದಿ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್ ಡೌನ್ ಯಾವಾಗ ಮುಗಿಯುತ್ತೆ ಎಂಬ ನಿರೀಕ್ಷೆಯಲ್ಲಿದ್ದವರಿಗೆ ಕೊನೆಗೂ ‘ಸಿಹಿ ಸುದ್ದಿ’

ನವದೆಹಲಿ: ಲಾಕ್ ಡೌನ್ ಯಾವಾಗ ಮುಕ್ತಾಯವಾಗುತ್ತೆ ಎಂದು ಕಾಯುತ್ತಿದ್ದವರಿಗೆ ಗುಡ್ ನ್ಯೂಸ್ ಇಲ್ಲಿದೆ. ಪ್ರಸ್ತುತ ಜಾರಿಯಲ್ಲಿರುವ ಎರಡನೇ ಹಂತದ ಲಾಕ್ ಡೌನ್ ಮೇ 3 ರಂದು ಮುಕ್ತಾಯವಾಗಲಿದೆ. ಮೇ 4 ರಿಂದ ಅನ್ವಯವಾಗುವಂತೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಲಿದೆ.

ಹಾಟ್ ಸ್ಪಾಟ್ ಗಳಲ್ಲಿ ಲಾಕ್ ಡೌನ್ ವಿಸ್ತರಣೆಯಾಗಲಿದೆ. ಈ ಕುರಿತಾಗಿ ಶೀಘ್ರದಲ್ಲೇ ಮಾರ್ಗಸೂಚಿ ಪ್ರಕಟಿಸಲಾಗುವುದು ಎಂದು ಕೇಂದ್ರ ಗೃಹ ಮಂತ್ರಾಲಯ ಹೇಳಿದೆ.

ಮೇ 3 ರ ಬಳಿಕವೂ ಹಾಟ್ ಸ್ಪಾಟ್ ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರೆಯಲಿದ್ದು, ವಿನಾಯಿತಿ ಇರುವುದಿಲ್ಲ. ಲಾಕ್ ಡೌನ್ ಪರಿಸ್ಥಿತಿ ಕುರಿತಾಗಿ ಸಮಗ್ರ ಪರಿಶೀಲನೆ ನಡೆಸಲಾಗಿದೆ. ಲಾಕ್ ಡೌನ್ ಮುಂದುವರೆಸಿದ್ದರಿಂದ ಕೊರೋನಾ ಸೋಂಕು ತಡೆಗೆ ಅನುಕೂಲವಾಗಿದೆ. ಲಾಕ್ ಡೌನ್ ನಿಂದ ಲಾಭವಾಗಿದ್ದು ಕೊರೋನಾ ನಿಯಂತ್ರಣಕ್ಕೆ ಮೇ 3 ರವರೆಗೆ ಕಟ್ಟುನಿಟ್ಟಾಗಿ ಲಾಕ್ ಡೌನ್ ಪಾಲಿಸಬೇಕು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...