alex Certify BIG NEWS: ಮತ್ತೆ ದೇಶವನ್ನುದ್ದೇಶಿಸಿ ಮೋದಿ ಭಾಷಣ, ಮಹತ್ವದ ಘೋಷಣೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತ್ತೆ ದೇಶವನ್ನುದ್ದೇಶಿಸಿ ಮೋದಿ ಭಾಷಣ, ಮಹತ್ವದ ಘೋಷಣೆ ಸಾಧ್ಯತೆ

 ನವದೆಹಲಿ: ಪ್ರಸ್ತುತ ಜಾರಿಯಲ್ಲಿರುವ ಲಾಕ್ ಡೌನ್ ಮೇ 3 ರಂದು ಮುಕ್ತಾಯವಾಗಲಿದ್ದು ಈಗಾಗಲೇ ಕೊರೋನಾ ಸೋಂಕು ಇಲ್ಲದ ಪ್ರದೇಶಗಳಲ್ಲಿ ಅನೇಕ ಚಟುವಟಿಕೆಗಳಿಗೆ ವಿನಾಯತಿ ನೀಡಲಾಗಿದೆ.

ಮೇ 3 ರಂದು ಲಾಕಕ್ ಡೌನ್ ಮುಕ್ತಾಯವಾಗಲಿದ್ದು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ದೇಶದ ಜನರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮೇ 2 ರ ಶನಿವಾರ ಇಲ್ಲವೇ ಮೇ 3 ಭಾನುವಾರ ಮೋದಿ ಭಾಷಣ ಮಾಡಲಿದ್ದು ಲಾಕ್ಡೌನ್ ಮುಂದುವರಿಸಬೇಕೇ ಬೇಡವೇ ಎಂದು ಘೋಷಣೆ ಮಾಡುವ ಸಾಧ್ಯತೆ ಇದೆ.

ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿರುವ ಮೋದಿ ಲಾಕ್ಡೌನ್ ಮುಂದುವರೆಸುವ ಕುರಿತು ತೀರ್ಮಾನ ಕೈಗೊಳ್ಳಲು ಸಲಹೆ ನೀಡಿದ್ದಾರೆ. ಅನೇಕ ರಾಜ್ಯಗಳಲ್ಲಿ ಮೇ 7, ಮೇ 15 ರವರೆಗೂ ಲಾಕ್ ಡೌನ್ ಮುಂದುವರಿಸಲು ತೀರ್ಮಾನಿಸಲಾಗಿದೆ. ಕೇಂದ್ರ ಗೃಹ ಮಂತ್ರಾಲಯ ಮಾರ್ಗಸೂಚಿ ಬಿಡುಗಡೆ ಮಾಡಿ ಸೋಂಕು ಇಲ್ಲದ ಪ್ರದೇಶಗಳಿಗೆ ವಿನಾಯಿತಿ ನೀಡಿದೆ. ಇನ್ನಷ್ಟು ನಿರ್ಬಂಧ ಸಡಿಲಿಕೆ ಮಾಡಲಾಗುವುದು. ಇಲ್ಲವೇ ಷರತ್ತುಗಳೊಂದಿಗೆ ಲಾಕ್ ಡೌನ್ ಸಂಪೂರ್ಣ ಸಡಿಲಿಕೆ ಮಾಡಬಹುದೆಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...