alex Certify BIG BREAKING NEWS: ಲಾಕ್ಡೌನ್ ಸಡಿಲ ನಿರೀಕ್ಷೆಯಲ್ಲಿದ್ದವರಿಗೆ ಶಾಕ್..! ಇನ್ನೂ 15 ದಿನ ಲಾಕ್ಡೌನ್ ಮುಂದುವರಿಕೆ..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಲಾಕ್ಡೌನ್ ಸಡಿಲ ನಿರೀಕ್ಷೆಯಲ್ಲಿದ್ದವರಿಗೆ ಶಾಕ್..! ಇನ್ನೂ 15 ದಿನ ಲಾಕ್ಡೌನ್ ಮುಂದುವರಿಕೆ..?

ನವದೆಹಲಿ: ಕಂಟೇನ್ಮೆಂಟ್ ಪ್ರದೇಶ ಹೊರತುಪಡಿಸಿ ಉಳಿದೆಡೆ ಲಾಕ್ ಡೌನ್ ನಿಯಮ ಸಡಿಲವಾಗಲಿದ್ದು, ಬಹುತೇಕ ಎಲ್ಲಾ ಚಟುವಟಿಕೆಗಳಿಗೆ ಅವಕಾಶ ನೀಡಲಾಗುತ್ತದೆ. ಭಾನುವಾರ ಲಾಕ್ ಡೌನ್ 3.0 ಮುಕ್ತಾಯವಾಗಲಿದ್ದು, ಸೋಮವಾರದಿಂದ ಲಾಕ್ ಡೌನ್ 4.0 ಹೊಸ ನಿಯಮಗಳೊಂದಿಗೆ ಆರಂಭವಾಗಲಿದೆ. ಇದಕ್ಕಾಗಿ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎನ್ನಲಾಗಿತ್ತು.

ಆದರೆ, ಇನ್ನು ಎರಡು ವಾರ ಕಾಲ ಲಾಕ್ ಡೌನ್ ಮುಂದುವರಿಸುವ ಸಾಧ್ಯತೆ ಇದೆ. ಮುಂದಿನ ಎರಡು ವಾರಗಳ ಕಾಲ ಲಾಕ್ಡೌನ್ ಮುಂದುವರೆಸಲು ಕೇಂದ್ರ ಸರ್ಕಾರ ತೀರ್ಮಾನ ಕೈಗೊಂಡಿದೆ ಎನ್ನಲಾಗಿದೆ.

ಕರ್ನಾಟಕ ಸೇರಿದಂತೆ ದೇಶಾದ್ಯಂತ ಮೇ 31 ರವರೆಗೆ ಲಾಕ್ ಡೌನ್ ಮುಂದುವರಿಸಲಾಗುವುದು. ಜೂನ್ 30 ರವರೆಗೆ ಪ್ರಯಾಣಿಕರ ರೈಲು ಸಂಚಾರವನ್ನು ಬಂದ್ ಮಾಡಲಾಗಿದ್ದು, ಮೇ 31ರವರೆಗೆ ವಿಮಾನ ಸಂಚಾರವನ್ನು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿದೆ. ಮೂರು ರಾಜ್ಯಗಳಲ್ಲಿ ಈಗಾಗಲೇ ಮೇ 31 ರ ವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ.

ಪ್ರಧಾನಿ ಮೋದಿ ಕೂಡ ಲಾಕ್ ಡೌನ್ ವಿಸ್ತರಿಸಲು ಚಿಂತನೆ ನಡೆಸಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 5000ಕ್ಕೂ ಅಧಿಕ ಮಂದಿಗೆ ಕೊರೋನಾ ಸೋಂಕು ತಗುಲಿರುವುದು ಗೊತ್ತಾಗಿದೆ. ಪರಿಸ್ಥಿತಿ ಗಂಭೀರವಾಗಿರುವ ಹಿನ್ನಲೆಯಲ್ಲಿ ಮುಂದಿನ ಎರಡು ವಾರಗಳ ಕಾಲ ಮುಂದುವರಿಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...