BIG BREAKING: ಮಹಾರಾಷ್ಟ್ರದಲ್ಲಿ ಜನವರಿ 31 ರ ವರೆಗೆ ʼಲಾಕ್ ಡೌನ್ʼ ನಿರ್ಬಂಧ 30-12-2020 12:29PM IST / No Comments / Posted In: Latest News, India ರೂಪಾಂತರ ಕೊರೊನಾ ಪ್ರಕರಣಗಳು ಭಾರತದಲ್ಲೂ ವರದಿಯಾಗುತ್ತಿದ್ದಂತೆ ಮಹಾರಾಷ್ಟ್ರ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಜನವರಿ 31 ರ ವರೆಗೆ ಲಾಕ್ ಡೌನ್ ನಿರ್ಬಂಧಗಳನ್ನು ಮುಂದುವರೆಸಲಾಗಿದ್ದು, ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ. ದೇಶದಲ್ಲಿ ಈಗ ಕಾಣಿಸಿಕೊಂಡಿರುವ ಬ್ರಿಟನ್ ವೈರಸ್ ಶೇ.70 ರಷ್ಟು ವೇಗದಲ್ಲಿ ಹರಡುತ್ತದೆ ಎನ್ನಲಾಗಿದ್ದು, ಹೀಗಾಗಿಯೇ ಮುಂಜಾಗ್ರತಾ ಕ್ರಮವಾಗಿ ಮಹಾರಾಷ್ಟ್ರ ಸರ್ಕಾರ ಇಂತದೊಂದು ನಿರ್ಧಾರ ಕೈಗೊಂಡಿದೆ. ಭಾರತ ಸರ್ಕಾರ ಈ ಮೊದಲೇ ಬ್ರಿಟನ್ ನಿಂದ ಆಗಮಿಸುವ ಅಥವಾ ತೆರಳುವ ವಿಮಾನಗಳ ಮೇಲೆ ನಿಷೇಧ ಹೇರಿದೆ. ಹೊಸ ವರ್ಷ ಆಚರಣೆ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಕೊರೊನಾ ಸೋಂಕು ಮತ್ತೆ ವ್ಯಾಪಕವಾಗಬಹುದೆಂಬ ಭೀತಿ ಮಹಾರಾಷ್ಟ್ರ ಸರ್ಕಾರವನ್ನು ಕಾಡುತ್ತಿದೆ. ಕರ್ನಾಟಕ ಸೇರಿದಂತೆ ದೇಶದ ಇತರೆ ರಾಜ್ಯಗಳಲ್ಲೂ ರೂಪಾಂತರ ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗುತ್ತಿದ್ದು, ಮತ್ತೊಮ್ಮೆ ಲಾಕ್ ಡೌನ್ ಹೇರಲಾಗುತ್ತದಾ ಎಂಬ ಆತಂಕ ಎದುರಾಗಿದೆ. Maharashtra Government extends lockdown restrictions in the state till 31st January 2021, to prevent the spread of COVID19 pic.twitter.com/mAJOhHDQkY — ANI (@ANI) December 30, 2020