alex Certify ಲಾಕ್ ಡೌನ್ ತೆರವಿನ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ನಾಳೆಯಿಂದ ಬಸ್ ಸೇರಿ ಬಹುತೇಕ ಸೇವೆ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್ ಡೌನ್ ತೆರವಿನ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ನಾಳೆಯಿಂದ ಬಸ್ ಸೇರಿ ಬಹುತೇಕ ಸೇವೆ ಆರಂಭ

ನವದೆಹಲಿ: ದೇಶಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ 3.0 ಇಂದಿಗೆ ಅಂತ್ಯವಾಗಲಿದ್ದು, ಲಾಕ್ ಡೌನ್ 4.0 ಮಾರ್ಗಸೂಚಿಯನ್ನು ಇಂದು ಬಿಡುಗಡೆ ಮಾಡುವ ಸಾಧ್ಯತೆಯಿದೆ.

ಸಿನಿಮಾ ಮಂದಿರ, ಶಾಲೆ, ಸಭೆ, ಸಮಾರಂಭ ಮೊದಲಾದವುಗಳನ್ನು ಹೊರತುಪಡಿಸಿ ಉಳಿದೆಲ್ಲ ಸೇವೆಗಳನ್ನು ಆರಂಭಿಸುವ ಸಾಧ್ಯತೆ ಇದೆ. ಬಸ್, ಮೆಟ್ರೋ, ದೇಶೀಯ ವಿಮಾನ, ಕ್ಲಿನಿಕ್ ಸೇವೆಗಳನ್ನು ಆರಂಭಿಸಬಹುದು ಎಂದು ಹೇಳಲಾಗಿದೆ.

ಕೊರೋನಾ ಸೋಂಕು ತಡೆಗೆ ಜಾರಿಗೆ ತಂದಿರುವ ಮೂರನೇ ಹಂತದ ಲಾಕ್ ಡೌನ್ ಇಂದು ಕೊನೆಯಾಗಲಿರುವ ಹಿನ್ನಲೆಯಲ್ಲಿ ಸೋಮವಾರದಿಂದ ಹೊಸ ನಿಯಮ ಮತ್ತು ಹೊಸ ರೂಪದೊಂದಿಗೆ ಲಾಕ್ ಡೌನ್ 4.0 ಜಾರಿಯಾಗಲಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ಮಾರ್ಗಸೂಚಿಗಳನ್ನು ಇಂದು ಬಿಡುಗಡೆ ಮಾಡುವ ಸಾಧ್ಯತೆ ದಟ್ಟವಾಗಿದೆ.

ಕಂಟೇನ್ಮೆಂಟ್ ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಕಡೆಗಳಲ್ಲಿ ಲಾಕ್ಡೌನ್ ನಿರ್ಬಂಧಗಳನ್ನು ಬಹುತೇಕ ತೆರವುಗೊಳಿಸಲಾಗುವುದು. ಅದೇ ರೀತಿ ರಾಜ್ಯ ಸರ್ಕಾರಗಳಿಗೆ ಲಾಕ್ ಡೌನ್ ಕುರಿತಾದ ತೀರ್ಮಾನ ಕೈಗೊಳ್ಳುವ ಜವಾಬ್ದಾರಿ ನೀಡಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...