alex Certify ಮೇ 17 ಕ್ಕೆ ಲಾಕ್ ಡೌನ್ ಮುಗಿಯುವ ನಿರೀಕ್ಷೆಯಲ್ಲಿದ್ದವರಿಗೆ ‘ಶಾಕಿಂಗ್ ನ್ಯೂಸ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೇ 17 ಕ್ಕೆ ಲಾಕ್ ಡೌನ್ ಮುಗಿಯುವ ನಿರೀಕ್ಷೆಯಲ್ಲಿದ್ದವರಿಗೆ ‘ಶಾಕಿಂಗ್ ನ್ಯೂಸ್’

ಕೊರೋನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡಲಾಗಿದ್ದು ಮೇ 17 ಕ್ಕೆ ಮೂರನೇ ಹಂತದ ಲಾಕ್ಡೌನ್ ಮುಕ್ತಾಯವಾಗಲಿದೆ.

ಆದರೆ ಕೊರೋನಾ ಸೋಂಕು ಹರಡುವ ಪ್ರಮಾಣ ಮುಂದುವರೆದಿರುವುದರಿಂದ ಲಾಕ್ಡೌನ್ ಕೂಡ ಮುಂದುವರಿಸುವ ಸಾಧ್ಯತೆ ಇದೆ. ಲಾಕ್ ಡೌನ್  ಹಿಂಪಡೆದು ಮತ್ತೆ ಸಮಸ್ಯೆಗೆ ಅವಕಾಶ ಕೊಡಬೇಡಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ.

ಅನೇಕ ದೇಶಗಳಲ್ಲಿ ಆರ್ಥಿಕತೆ ಉದ್ದೇಶದಿಂದ ಲಾಕ್ಡೌನ್ ಸಡಿಲಗೊಳಿಸಿದ್ದು, ಮತ್ತೆ ಕೆಲವು ದೇಶಗಳಲ್ಲಿ ಲಾಕ್ಡೌನ್ ಹಿಂಪಡೆಯಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೋಸ್ ಅಧಾನೊಮ್ ಗೆಬ್ರೋಸ್, ಕೊರೋನಾ ಸೋಂಕು ತೀವ್ರವಾಗಿ ಹರಡುವುದನ್ನು ತಡೆಯಲು ಮುನ್ನೆಚ್ಚರಿಕೆ ವಹಿಸಬೇಕು. ಲಾಕ್ಡೌನ್ ಅನ್ನು ಹಂತ ಹಂತವಾಗಿ ತೆರವುಗೊಳಿಸಬೇಕು. ಎಚ್ಚರಿಕೆ ವಹಿಸದಿದ್ದರೆ ಮತ್ತೆ ಲಾಕ್ಡೌನ್ ಜಾರಿಗೊಳಿಸಬೇಕಾದ ಅಪಾಯ ಎದುರಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಭಾರತದಲ್ಲಿ ಲಾಕ್ ಡೌನ್ ಮುಂದುವರೆದಿದ್ದರೂ, ಅನೇಕ ವಿನಾಯಿತಿ ನೀಡಲಾಗಿದೆ. ಆದರೆ, ಸೋಂಕು ಹರಡುವುದು ಮಾತ್ರ ಮುಂದುವರಿದಿರುವುದರಿಂದ ಇನ್ನಷ್ಟು ದಿನಗಳ ಕಾಲ ಲಾಕ್ ಡೌನ್, ಸೀಲ್ ಡೌನ್ ಮುಂದುವರೆಯಬಹುದೆಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...