alex Certify ಅಪ್ರಾಪ್ತರಿಂದಲೇ ಆಘಾತಕಾರಿ ಕೃತ್ಯ: ಮನೆಗೆಲಸದ ಹುಡುಗಿ ಮೇಲೆ ಸಾಮೂಹಿಕ ಅತ್ಯಾಚಾರ, ವಿಡಿಯೋ ಮಾಡಿ ಬೆದರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪ್ರಾಪ್ತರಿಂದಲೇ ಆಘಾತಕಾರಿ ಕೃತ್ಯ: ಮನೆಗೆಲಸದ ಹುಡುಗಿ ಮೇಲೆ ಸಾಮೂಹಿಕ ಅತ್ಯಾಚಾರ, ವಿಡಿಯೋ ಮಾಡಿ ಬೆದರಿಕೆ

ಲೂಧಿಯಾನ: ಲೂಧಿಯಾನದಲ್ಲಿ 16 ವರ್ಷದ ಬಾಲಕಿಯ ಮೇಲೆ ಮೂವರು ಸಾಮೂಹಿಕ ಅತ್ಯಾಚಾರ ಎಸಗಿದ್ದು, ತಮ್ಮ ಕೃತ್ಯದ ದೃಶ್ಯಗಳನ್ನು ಮೊಬೈಲ್ ಫೋನ್ನಲ್ಲಿ ವಿಡಿಯೋ ಮಾಡಿಕೊಂಡಿದ್ದಾರೆ.

ಭಾನುವಾರ ಸಂಜೆ ಘಟನೆ ನಡೆದಿದ್ದು ಮಂಗಳವಾರ ರಾತ್ರಿ ಬಾಲಕಿ ಘಟನೆಯ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದ್ದಾಳೆ. ಮನೆಗೆಲಸ ಮಾಡುವ ಹುಡುಗಿ ಭಾನುವಾರ ಕೆಲಸ ಮುಗಿದ ನಂತರ ಮನೆಗೆ ಮರಳುತ್ತಿದ್ದ ಸಮಯದಲ್ಲಿ ಅಡ್ಡಗಟ್ಟಿದ ಯುವಕರು ಬೈಕ್ ನಲ್ಲಿ ಬರುವಂತೆ ಬಲವಂತ ಮಾಡಿದ್ದಾರೆ.

ಆಸಿಡ್ ದಾಳಿ ನಡೆಸುವ ಬೆದರಿಕೆ ಹಾಕಿ ಆಕೆಯನ್ನು ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಬಳಿಕ ವಿಡಿಯೋ ಮಾಡಿಕೊಂಡಿದ್ದಾರೆ. ಆರಂಭದಲ್ಲಿ ಘಟನೆಯ ಬಗ್ಗೆ ಪೋಷಕರಿಗೆ ಮಾಹಿತಿ ನೀಡದ ಬಾಲಕಿ ಮಂಗಳವಾರ ರಾತ್ರಿ ವಿಷಯ ಹೇಳಿಕೊಂಡಿದ್ದಾಳೆ. ಪೋಷಕರು ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದ್ದಾರೆ. ಡಿವಿಜನ್ ನಂಬರ್ 3 ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳು 14ರಿಂದ 16 ವರ್ಷದ ಒಳಗಿನವರಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...