ಮಧ್ಯಪ್ರದೇಶದ ರಾಜ್ಯಪಾಲ್ ಲಾಲ್ ಜಿ ಟಂಡನ್ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಲಕ್ನೋದ ಮೇದಾಂತ ಆಸ್ಪತ್ರೆಯಲ್ಲಿ ದಾಖಲಿಸಿ ಲಾಲ್ ಜಿ ಟಂಡನ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಜ್ವರ ಹಾಗೂ ಉಸಿರಾಟದ ಸಮಸ್ಯೆಯಿಂದ ಲಾಲ್ ಜಿ ಟಂಡನ್ ಬಳಲುತ್ತಿದ್ದರೆಂದು ಹೇಳಲಾಗಿದೆ.
ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ನಿಕಟವರ್ತಿಗಳಾಗಿದ್ದ ಲಾಲ್ ಜಿ ಟಂಡನ್, ಭಾರತೀಯ ಜನತಾ ಪಕ್ಷದ ಮುಂಚೂಣಿ ನಾಯಕರಲ್ಲೊಬ್ಬರಾಗಿದ್ದರು.
85 ವರ್ಷದ ಲಾಲ್ ಜಿ ಟಂಡನ್ ಮಧ್ಯ ಪ್ರದೇಶದ 22 ನೇ ರಾಜ್ಯಪಾಲರಾಗಿ ಕಾರ್ಯ ನಿರ್ವಹಿಸುತ್ತಿದ್ದರು.