ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಆರೋಪಿಗೆ ನ್ಯಾಯಾಲಯ ಜಾಮೀನು ನೀಡಿದೆ.
ಮಧ್ಯಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧಿತನಾಗಿದ್ದ ವಿಕ್ರಂ ಬಗ್ರಿ ಎಂಬಾತನಿಗೆ ಇಂದೋರ್ ನ್ಯಾಯಪೀಠ ಜಾಮೀನು ಮಂಜೂರು ಮಾಡಿದೆ.
ಈತ ಲೈಂಗಿಕ ಕಿರುಕುಳದ ಸಂತ್ರಸ್ತೆಯಿಂದ ರಾಖಿ ಕಟ್ಟಿಸಿಕೊಳ್ಳಬೇಕು. ಜೊತೆಗೆ ಆಕೆಯನ್ನು ಭವಿಷ್ಯದಲ್ಲಿ ಸಂರಕ್ಷಿಸಬೇಕು ಎಂದು ನ್ಯಾಯಪೀಠ ತಿಳಿಸಿದ್ದು, ಆರೋಪಿ ರಾಖಿ ಕಟ್ಟಿಸಿಕೊಂಡ ಫೋಟೋ ಹಾಗೂ ಈ ವೇಳೆ ಆಕೆಗೆ 11 ಸಾವಿರ ರೂಪಾಯಿ ನೀಡಿದ ಮಾಹಿತಿಯನ್ನು ನ್ಯಾಯಾಲಯಕ್ಕೆ ತಿಳಿಸಬೇಕು ಎಂದು ತಾಕೀತು ಮಾಡಿದೆ.