ಮಹಾಕುಂಭ ಮೇಳಕ್ಕೆ ತೆರಳುವ ಮಾರ್ಗದಲ್ಲಿ ಎರಡು ಪ್ರತ್ಯೇಕ ಅಪಘಾತಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಕಾರು ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಭಕ್ತರು ಸಾವನ್ನಪ್ಪಿದ್ದಾರೆ. ರಾಜಸ್ಥಾನದ ಭರತ್ ಪುರ ಕರೌಲಿ ರಾಜ್ಯ ಹೆದ್ದಾರಿಯಲ್ಲಿ ಈ ಪಘಾತ ಸಂಭವಿಸಿದೆ.
ಮೃತರು ಉತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದರು. ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.
ಗೋಪಾಲ್ ಸಿಂಗ್ (32), ರಾಮಚಂದ್ರ (30) ಲಖನ್ ಸಿಂಗ್ (350 ಮೃತರು ಎಂದು ತಿಳಿದುಬಂದಿದೆ.
ಇದೇ ವೇಳೆ ಮಹಾಕುಂಭಮೇಳಕ್ಕೆ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ 40 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ದೆಹಲಿ ಹಾಗೂ ಫರಿದಾಬಾದ್ ನಿಂದ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ವೇಳೆ ಬಸ್ ಅಪಘಾತಕ್ಕೀಡಾಗಿದೆ.