alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ – ಮಹಾರಾಷ್ಟ್ರದ ನಾಗ್ಪುರದಲ್ಲಿ ಮತ್ತೆ ʼಲಾಕ್‌ ಡೌನ್ʼ‌ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ – ಮಹಾರಾಷ್ಟ್ರದ ನಾಗ್ಪುರದಲ್ಲಿ ಮತ್ತೆ ʼಲಾಕ್‌ ಡೌನ್ʼ‌ ಜಾರಿ

 

 

ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿಯಂತ್ರಣಕ್ಕೆ ಬರುವಂತೆ ಕಾಣ್ತಿಲ್ಲ. ಕಳೆದ ವರ್ಷವೂ ಕೊರೊನಾದಿಂದ ಸರಿಯಾಗಿ ಹೊಡೆತ ತಿಂದಿದ್ದ ಮಹಾರಾಷ್ಟ್ರ ಈ ವರ್ಷವೂ ಕೊರೊನಾಗೆ ಅತಿ ಹೆಚ್ಚು ತುತ್ತಾದ ರಾಜ್ಯವಾಗಿದೆ.

ದಿನದಿಂದ ದಿನಕ್ಕೆ ಕೊರೊನಾ ವೈರಸ್​ ಸೋಂಕಿತರ ಸಂಖ್ಯೆ ಹೆಚ್ಚಳ ಹಿನ್ನೆಲೆ ನಾಗ್ಪುರ ಜಿಲ್ಲೆಯಲ್ಲಿ ಮಾರ್ಚ್ 15ರಿಂದ 21ರವರೆಗೆ ಒಂದು ವಾರಗಳ ಕಾಲ ಮಹಾರಾಷ್ಟ್ರ ಸರ್ಕಾರ ಲಾಕ್​ಡೌನ್​ ವಿಧಿಸಿದೆ.

ಮಹಾರಾಷ್ಟ್ರದಲ್ಲಿ ಬುಧವಾರ 13,659 ಹೊಸ ಕೊರೊನಾ ಕೇಸ್​ಗಳು ವರದಿಯಾದ ಬಳಿಕ ಶಿವಸೇನಾ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಇದು ಈ ವರ್ಷದಲ್ಲಿ ಒಂದೇ ದಿನದಲ್ಲಿ ದಾಖಲಾದ ಅತಿ ಹೆಚ್ಚು ಕೊರೊನಾ ಸೋಂಕಿತರ ಸಂಖ್ಯೆ ಆಗಿದೆ.

ಇಲ್ಲಿಯವರೆಗೆ ಮಹಾರಾಷ್ಟ್ರದಲ್ಲಿ ಒಟ್ಟು 22,52,057 ಕೊರೊನಾ ಕೇಸ್​ಗಳು ವರದಿಯಾಗಿದೆ. ಮುಂದಿನ ದಿನದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯನ್ನ ನೋಡಿಕೊಂಡು ಲಾಕ್​ಡೌನ್​ ಮುಂದುವರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರ ಹೇಳಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...