alex Certify ಚಾಕೊಲೇಟ್ ಕೊಟ್ಟು ಕಾಮತೃಷೆ ತೀರಿಸಿಕೊಂಡ ಯುವಕನಿಂದ ಘೋರ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಾಕೊಲೇಟ್ ಕೊಟ್ಟು ಕಾಮತೃಷೆ ತೀರಿಸಿಕೊಂಡ ಯುವಕನಿಂದ ಘೋರ ಕೃತ್ಯ

ಮಧ್ಯಪ್ರದೇಶದ ದಾಮೋಹ್ ನಲ್ಲಿ 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಆಕೆಯ ಕಣ್ಣುಗಳನ್ನು ಕೀಳಲು ಯತ್ನಿಸಿದ ಆಘಾತಕಾರಿ ಘಟನೆ ನಡೆದಿದೆ.

ಏಪ್ರಿಲ್ 23 ರಂದು ಸಂಜೆ ಜಬೇರ ತಹಸಿಲ್ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಘಟನೆ ನಡೆದಿದೆ. ಮನೆಯ ಬಳಿ ಆಟವಾಡುತ್ತಿದ್ದ ಆರು ವರ್ಷದ ಬಾಲಕಿಗೆ ಚಾಕೊಲೇಟ್ ಆಮಿಷವೊಡ್ಡಿದ್ದ 22 ವರ್ಷದ ಯುವಕ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಆಕೆಯ ಕಣ್ಣುಗಳನ್ನು ಕೀಳಲು ಪ್ರಯತ್ನ ನಡೆಸಿದ್ದಾನೆ. ತೀವ್ರವಾಗಿ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿದ್ದ ಬಾಲೆಯನ್ನು ರಕ್ಷಣೆ ಮಾಡಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ದಾಮೋಹ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಹೇಮಂತ್ ಚೌಹಾಣ್ ತಿಳಿಸಿದ್ದಾರೆ.

ಮಾಹಿತಿ ದೊರೆತ ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿ ಸ್ಥಳೀಯ ಆಸ್ಪತ್ರೆಗೆ ಬಾಲಕಿಯನ್ನು ದಾಖಲಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜಬಲ್ ಪುರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿ ಹಿರಿಯ ನಾಯಕಿ ಮತ್ತು ಮಧ್ಯಪ್ರದೇಶದ ಮಾಜಿ ಸಿಎಂ ಉಮಾಭಾರತಿ ಪ್ರಕರಣವನ್ನು ತೀವ್ರವಾಗಿ ಖಂಡಿಸಿದ್ದು, ಆರೋಪಿಗೆ ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸಿದ್ದಾರೆ. ಇದೊಂದು ಅಮಾನವೀಯ ಕೃತ್ಯವಾಗಿದೆ. ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನಲ್ಲಿ ವಿಚಾರಣೆ ನಡೆಸಿ ಆರೋಪಿಗೆ ಮರಣದಂಡನೆ ವಿಧಿಸಬೇಕು. ಬಾಲಕಿ ಬದುಕುಳಿಯಲು ನಾವೆಲ್ಲರೂ ಪ್ರಾರ್ಥಿಸಬೇಕು ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಮಲ್ ನಾಥ್, ರಾಜ್ಯದಲ್ಲಿ ಏನು ನಡೆಯುತ್ತಿದೆ. 6 ವರ್ಷದ ಬಾಲಕಿಯ ಮೇಲೆ ಕ್ರೂರ ಕೃತ್ಯವೆಸಗಿದ್ದು, ಆಕೆಯ ಕಣ್ಣುಗಳು ಹಾಳಾಗಿವೆ. ಈ ಬಗ್ಗೆ ಮುಖ್ಯಮಂತ್ರಿಗಳು ಯಾವ ಕ್ರಮ ಕೈಗೊಂಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಮಧ್ಯಪ್ರದೇಶ‌ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಘಟನೆಯನ್ನು ಖಂಡಿಸಿ ಘಟನೆ ಬಗ್ಗೆ ಮಾಹಿತಿ ಪಡೆದು ಕ್ರಮಕ್ಕೆ ಸೂಚಿಸಿದ್ದೇನೆ. ಮುಗ್ಧ ಬಾಲಕಿ ಮೇಲೆ ನಡೆದ ಕೃತ್ಯ ನಾಚಿಕೆಗೇಡಿನ ಮತ್ತು ದುರದೃಷ್ಟಕರ ಸಂಗತಿಯಾಗಿದೆ. ಆರೋಪಿಯನ್ನು ಬಂಧಿಸಲಾಗಿದ್ದು ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...