alex Certify ಕಾಮದ ಮದದಲ್ಲಿ ದಾರಿ ತಪ್ಪಿದ ವಿವಾಹಿತ ಪುತ್ರಿ, ಮರ್ಯಾದೆಗೆ ಅಂಜಿದ ತಂದೆಯಿಂದ ಘೋರ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಮದ ಮದದಲ್ಲಿ ದಾರಿ ತಪ್ಪಿದ ವಿವಾಹಿತ ಪುತ್ರಿ, ಮರ್ಯಾದೆಗೆ ಅಂಜಿದ ತಂದೆಯಿಂದ ಘೋರ ಕೃತ್ಯ

ಮದುವೆಯ ನಂತರವೂ ಮಗಳು ಅಕ್ರಮ ಸಂಬಂಧ ಮುಂದುವರಿಸಿದ ಹಿನ್ನೆಲೆಯಲ್ಲಿ ಮರ್ಯಾದೆಗೆ ಅಂಜಿದ ತಂದೆಯೇ ಪುತ್ರಿಯನ್ನು ನಾಲಿಗೆ ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಿದ್ದಾನೆ.

ಉತ್ತರಪ್ರದೇಶದ ಬಹರೈಚ್ ನಲ್ಲಿ ಘಟನೆ ನಡೆದಿದೆ. 17 ವರ್ಷದ ಮಗಳನ್ನು ಮದುವೆ ಮಾಡಿದ್ದ ತಂದೆಯೇ ಇಂತಹ ಕೃತ್ಯ ಎಸಗಿದ್ದಾನೆ. ಮದುವೆಯಾಗಿದ್ದರೂ ಗಂಡನ ಮನೆ ತೊರೆದು ತವರು ಮನೆಯಲ್ಲಿ ಉಳಿದುಕೊಂಡಿದ್ದ ಯುವತಿ ಗ್ರಾಮದ ಸರಪಂಚನ ಪುತ್ರನ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದಳು. ಇದರಿಂದ ಕೋಪಗೊಂಡ ವ್ಯಕ್ತಿ ಮಗಳ ನಾಲಿಗೆ ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಿದ್ದಾನೆ.

ಈ ಹಿಂದೆಯೇ ಪುತ್ರಿ ಅಕ್ರಮ ಸಂಬಂಧದ ವಿಚಾರಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದರೂ ಪೊಲೀಸರು ಕ್ರಮ ಕೈಗೊಂಡಿರಲಿಲ್ಲ. ಕುಟುಂಬದ ಮರ್ಯಾದೆ ಹೋಗುತ್ತದೆ ಎನ್ನುವ ಕಾರಣಕ್ಕೆ ಈ ಕೃತ್ಯ ಎಸಗಿರುವುದಾಗಿ ವ್ಯಕ್ತಿ ಹೇಳಿಕೊಂಡಿದ್ದಾನೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಪುತ್ರಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಗ್ರಾಮದ ಸರಪಂಚನ ಪುತ್ರನನ್ನು ಕೂಡ ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಪಿನ್ ಮಿಶ್ರಾ ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...