ನವದೆಹಲಿ: ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಜಿ.ಸಿ. ಮುರ್ಮು ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಜಿ.ಸಿ. ಮುರ್ಮು ನೀಡಿದ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ಮನೋಜ್ ಸಿನ್ಹಾ ಅವರನ್ನು ನೇಮಕ ಮಾಡಲಾಗಿದ್ದು, ಶೀಘ್ರವೇ ಅವರು ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಲಾಗಿದ್ದ 370 ನೇ ವಿಧಿ ರದ್ದುಪಡಿಸಿ ಆಗಸ್ಟ್ 5 ಕ್ಕೆ ಒಂದು ವರ್ಷವಾಗಿದೆ.
ಉತ್ತರಪ್ರದೇಶದ ಘಾಜಿಪುರ ಲೋಕಸಭೆ ಕ್ಷೇತ್ರದಿಂದ ಎರಡು ಬಾರಿ ಬಿಜೆಪಿಯಿಂದ ಆಯ್ಕೆಯಾಗಿದ್ದ ಮನೋಜ್ ಸಿನ್ಹಾ ಕಳೆದ ಅವಧಿಯಲ್ಲಿ ಮೋದಿ ಸಂಪುಟದಲ್ಲಿ ಸಚಿವರಾಗಿದ್ದರು. ಅವರನ್ನು ಜಮ್ಮು ಮತ್ತು ಕಾಶ್ಮೀರದ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ ಮಾಡಲಾಗಿದೆ.