ಗುವಾಹಟಿ: ಅಸ್ಸಾಂ ಪೂರ್ವ ಪ್ರದೇಶದಲ್ಲಿರುವ ಆಯಿಲ್ ಇಂಡಿಯಾ ಲಿಮಿಟೆಡ್ ಗೆ ಸೇರಿರುವ ನೈಸರ್ಗಿಕ ಅನಿಲ ಬಾವಿಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ.
ಕಳೆದ 14 ದಿನಗಳಿಂದ ನೈಸರ್ಗಿಕ ಅನಿಲ ಸೋರಿಕೆಯಾಗುತ್ತಿದ್ದು ಬೆಂಕಿಯನ್ನು ನಂದಿಸಲು ಹರಸಾಹಸ ನಡೆಸಲಾಗಿದೆ. ತೀನ್ ಸುಕಿಯಾ ಜಿಲ್ಲೆಯ ತೈಲ ಕ್ಷೇತ್ರದ ಅನಿಲ ಬಾವಿಯಲ್ಲಿ ನಿರಂತರವಾಗಿ ಅನಿಲ ಸೋರಿಕೆಯಾಗುತ್ತಿದ್ದು ಸಿಂಗಾಪುರದ ತಜ್ಞರು ಮತ್ತು ಆಯಿಲ್ ಇಂಡಿಯಾ ಲಿಮಿಟೆಡ್ ಇಂಜಿನಿಯರ್ ಗಳ ತಂಡ ಸೋರಿಕೆ ನಿಯಂತ್ರಣಕ್ಕೆ ಪ್ರಯತ್ನ ನಡೆಸಿದೆ.
ಇದೇ ವೇಳೆ ಭಾರೀ ಬೆಂಕಿ ಕಾಣಿಸಿಕೊಂಡಿದ್ದು ದೂರದವರೆಗೂ ದಟ್ಟ ಹೊಗೆ ಬೆಂಕಿಯ ಜ್ವಾಲೆ ಆವರಿಸಿದೆ. ಸ್ಥಳೀಯರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ ಎನ್ನಲಾಗಿದೆ. ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ್ ಸೋನೋವಾಲಾ ಈ ಕುರಿತಾಗಿ ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.