alex Certify ಆಯಿಲ್ ಇಂಡಿಯಾ ಲಿಮಿಟೆಡ್ ಗೆ ಸೇರಿದ ಬಾವಿಯಲ್ಲಿ ನಿರಂತರ ಗ್ಯಾಸ್ ಸೋರಿಕೆ, ಭಾರೀ ಬೆಂಕಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಯಿಲ್ ಇಂಡಿಯಾ ಲಿಮಿಟೆಡ್ ಗೆ ಸೇರಿದ ಬಾವಿಯಲ್ಲಿ ನಿರಂತರ ಗ್ಯಾಸ್ ಸೋರಿಕೆ, ಭಾರೀ ಬೆಂಕಿ

ಗುವಾಹಟಿ: ಅಸ್ಸಾಂ ಪೂರ್ವ ಪ್ರದೇಶದಲ್ಲಿರುವ ಆಯಿಲ್ ಇಂಡಿಯಾ ಲಿಮಿಟೆಡ್ ಗೆ ಸೇರಿರುವ ನೈಸರ್ಗಿಕ ಅನಿಲ ಬಾವಿಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ.

ಕಳೆದ 14 ದಿನಗಳಿಂದ ನೈಸರ್ಗಿಕ ಅನಿಲ ಸೋರಿಕೆಯಾಗುತ್ತಿದ್ದು ಬೆಂಕಿಯನ್ನು ನಂದಿಸಲು ಹರಸಾಹಸ ನಡೆಸಲಾಗಿದೆ. ತೀನ್ ಸುಕಿಯಾ ಜಿಲ್ಲೆಯ ತೈಲ ಕ್ಷೇತ್ರದ ಅನಿಲ ಬಾವಿಯಲ್ಲಿ ನಿರಂತರವಾಗಿ ಅನಿಲ ಸೋರಿಕೆಯಾಗುತ್ತಿದ್ದು ಸಿಂಗಾಪುರದ ತಜ್ಞರು ಮತ್ತು ಆಯಿಲ್ ಇಂಡಿಯಾ ಲಿಮಿಟೆಡ್ ಇಂಜಿನಿಯರ್ ಗಳ ತಂಡ ಸೋರಿಕೆ ನಿಯಂತ್ರಣಕ್ಕೆ ಪ್ರಯತ್ನ ನಡೆಸಿದೆ.

ಇದೇ ವೇಳೆ ಭಾರೀ ಬೆಂಕಿ ಕಾಣಿಸಿಕೊಂಡಿದ್ದು ದೂರದವರೆಗೂ ದಟ್ಟ ಹೊಗೆ ಬೆಂಕಿಯ ಜ್ವಾಲೆ ಆವರಿಸಿದೆ. ಸ್ಥಳೀಯರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ ಎನ್ನಲಾಗಿದೆ. ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ್ ಸೋನೋವಾಲಾ ಈ ಕುರಿತಾಗಿ ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...