ಕೇರಳದ ಇಡುಕ್ಕಿ ಜಿಲ್ಲೆಯ ಮುನ್ನಾರ್ ನಲ್ಲಿ ಗುಡ್ಡ ಕುಸಿತವಾಗಿದ್ದು, ಅವಶೇಷಗಳಡಿ ಹಲವಾರು ಟೀ ಎಸ್ಟೇಟ್ ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಕಳೆದ ಮೂರು ದಿನಗಳಿಂದ ಈ ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ಹೀಗಾಗಿ ಗುಡ್ಡ ಕುಸಿತ ಸಂಭವಿಸಿದೆ ಎನ್ನಲಾಗಿದೆ.
ರಕ್ಷಣಾ ತಂಡದವರು ಸ್ಥಳಕ್ಕೆ ತೆರಳಲು ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಅಡ್ಡಿಯಾಗಿದ್ದು ಹೀಗಾಗಿ ಪರಿಹಾರ ಕಾರ್ಯಾಚರಣೆ ವಿಳಂಬವಾಗಿದೆ.