ಜಮ್ಮು: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಸಿಗುವವರೆಗೆ ರಾಷ್ಟ್ರಧ್ವಜ ಹಿಡಿಯುವುದಿಲ್ಲ ಎಂದು ಪಿಡಿಪಿ ಮುಖ್ಯಸ್ಥೆ ಮೆಹಬೂಬ ಮುಫ್ತಿ ಹೇಳಿಕೆ ನೀಡಿದ್ದು ಇದಕ್ಕೆ ವಿರೋಧ ವ್ಯಕ್ತವಾಗಿದೆ.
ಅವರ ಹೇಳಿಕೆಯಿಂದ ಅಸಮಾಧಾನಗೊಂಡ ಪಕ್ಷದ ಮೂವರು ಮುಖಂಡರು ರಾಜೀನಾಮೆ ನೀಡಿದ್ದಾರೆ. ಪಿಡಿಪಿ ಪಕ್ಷದ ಹಿರಿಯ ನಾಯಕ ಟಿ.ಎಸ್. ಬಾಜವಾ, ಹಸನ್ ಅಲಿ ವಾಘಾ ಮತ್ತು ಬೇದ್ ಮಹಾಜನ್ ಅವರು ರಾಜೀನಾಮೆ ನೀಡಿದ್ದಾರೆ.
ಇದರ ಬೆನ್ನಲ್ಲೇ ಮೆಹಬೂಬ ಮುಫ್ತಿ ವಿರುದ್ಧ ಜಮ್ಮುವಿನಲ್ಲಿ ಕೇಸ್ ದಾಖಲಿಸಲಾಗಿದೆ. ಭಾರತದ ತ್ರಿವರ್ಣ ಧ್ವಜಕ್ಕೆ ಅಪಮಾನ ಮಾಡಿದ ಆರೋಪದ ಮೇಲೆ ಮೆಹಬೂಬ ಮುಫ್ತಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಮರುಸ್ಥಾಪನೆಯವರೆಗೆ ಭಾರತದ ಧ್ವಜ ಹಿಡಿಯುವುದಿಲ್ಲ ಎಂದು ಅವರು ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಜಮ್ಮುವಿನಲ್ಲಿ ಕೇಸ್ ದಾಖಲಿಸಲಾಗಿದೆ.