alex Certify ವಾಟ್ಸಾಪ್ ನಲ್ಲಿ ಸೆಂಡ್ ಆಯ್ತು ಅತ್ಯಾಚಾರದ ವಿಡಿಯೋ: ಊರಿನವರಿಗೆಲ್ಲಾ ಬಿಗ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಟ್ಸಾಪ್ ನಲ್ಲಿ ಸೆಂಡ್ ಆಯ್ತು ಅತ್ಯಾಚಾರದ ವಿಡಿಯೋ: ಊರಿನವರಿಗೆಲ್ಲಾ ಬಿಗ್ ಶಾಕ್

ಭೋಪಾಲ್: ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಲಾಗಿದೆ.

ಘಟನೆಯ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಲಾಗಿದ್ದು, ವಿಡಿಯೋ ಬೆಳಕಿಗೆ ಬಂದ ನಂತರ ಸ್ಥಳೀಯ ಪೊಲೀಸರು ವಿಡಿಯೋ ಫಾರ್ವರ್ಡ್ ಮಾಡಿದ್ದ 25 ಜನರ ವಿರುದ್ಧ ಕ್ರಮಕೈಗೊಂಡಿದ್ದಾರೆ.

ಪ್ರಮುಖ ಆರೋಪಿ ಅರುಣ್ ಪಟೇಲ್ ಮತ್ತು ದೃಶ್ಯವನ್ನು ಚಿತ್ರೀಕರಿಸಿದ 15 ವರ್ಷದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು 25 ಜನರ ಮಾಹಿತಿ ಕಲೆಹಾಕಿದ್ದಾರೆ.

ಸೆಪ್ಟೆಂಬರ್ 22 ರಂದು ಬಾಲಕಿ ಮೇಲೆ ಅತ್ಯಾಚಾರ ನಡೆದಿತ್ತು. ವಿಡಿಯೋ ಮಾಡಿಕೊಂಡಿದ್ದ ಆರೋಪಿಗಳು ಅದನ್ನು ತೋರಿಸಿ ಬ್ಲಾಕ್ಮೇಲ್ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ. ಗ್ರಾಮದ ವಾಟ್ಸಾಪ್ ಗ್ರೂಪ್ ನಲ್ಲಿ ಅಶ್ಲೀಲ ಕೃತ್ಯದ ವಿಡಿಯೋ ಪೋಸ್ಟ್ ಮಾಡಲಾಗಿದೆ.

ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ವಿಡಿಯೋ ಅಳಿಸುವಂತೆ ತಾಕೀತು ಮಾಡಿದ್ದಾರೆ. ದಾಮೋಹ್ ಹೆಚ್ಚುವರಿ ಎಸ್ಪಿ ಶಿವಕುಮಾರ್ ಸಿಂಗ್ ಈ ಬಗ್ಗೆ ಮಾಹಿತಿ ನೀಡಿ, ಸೈಬರ್ ಸೆಲ್ ಸಹಾಯದಿಂದ ವಾಟ್ಸಾಪ್ ಗುಂಪಿನ ಎಲ್ಲ ಸದಸ್ಯರ ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...