ನವದೆಹಲಿ: ಒಂದು ತಿಂಗಳೊಳಗೆ ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರಿಗೆ ಕೇಂದ್ರ ಸರ್ಕಾರ ಆದೇಶಿಸಿದೆ.
ಝಡ್ ಪ್ಲಸ್ ಸೆಕ್ಯೂರಿಟಿ ಹಿಂಪಡೆದ ನಂತರ ಈಗ ಮನೆ ಖಾಲಿ ಮಾಡಲು ಸೂಚಿಸಲಾಗಿದೆ. ಒಂದು ತಿಂಗಳೊಳಗೆ ಸರ್ಕಾರಿ ನಿವಾಸ ಖಾಲಿ ಮಾಡುವಂತೆ ನೋಟಿಸ್ ನೀಡಲಾಗಿದೆ. ದೆಹಲಿ ಲೋಧಿ ಎಸ್ಟೇಟ್ ನಂಬರ್ 35 ನಿವಾಸದಲ್ಲಿ ಪ್ರಿಯಾಂಕಾ ಗಾಂಧಿ ವಾಸವಾಗಿದ್ದು ಈ ನಿವಾಸವನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ.
ಕಳೆದ ವರ್ಷ ನವಂಬರ್ ನಲ್ಲಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ, ರಾಹುಲ್ ಗಾಂಧಿ ಅವರಿಗೆ ನೀಡಲಾಗಿದ್ದ ಎಸ್ಪಿಜಿ ಭದ್ರತೆಯನ್ನು ಹಿಂಪಡೆಯಲಾಗಿತ್ತು. ಅದೇ ರೀತಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಎಸ್ಪಿಜಿ ಭದ್ರತೆಯನ್ನು ಕೈಬಿಡಲಾಗಿದ್ದು ಪ್ರಸ್ತುತ ಪ್ರಧಾನಿ ಮೋದಿ ಮಾತ್ರ ಎಸ್ಪಿಜಿ ಭದ್ರತೆ ಹೊಂದಿದ್ದಾರೆ. ಈಗ ಪ್ರಿಯಾಂಕಾ ಗಾಂಧಿಯವರಿಗೆ ಒಂದು ತಿಂಗಳು ವಿನಾಯಿತಿ ನೀಡಿ ಮನೆ ಖಾಲಿ ಮಾಡಲು ಸೂಚನೆ ನೀಡಲಾಗಿದೆ.