ಮುಂಬರುವ ಸಮಯದಲ್ಲಿ ಚಾಲನಾ ಪರವಾನಗಿ ಮತ್ತು ಹೊಸ ವಾಹನಗಳ ನೋಂದಣಿಗೆ ಸಂಬಂಧಿಸಿದ ನಿಯಮಗಳಲ್ಲಿ ಬದಲಾವಣೆಯಾಗಲಿದೆ. ಮೋಟಾರು ವಾಹನ ಕಾಯ್ದೆ ತಿದ್ದುಪಡಿಗಾಗಿ ಸ್ವೀಕರಿಸಿದ ಪ್ರಸ್ತಾವನೆಯಡಿ ಕೇಂದ್ರ ಸರ್ಕಾರ ಎಲ್ಲಾ ಮಧ್ಯಸ್ಥಗಾರರಿಂದ ಸಲಹೆಗಳನ್ನು ಕೋರಿದೆ.
ಮುಂದಿನ ಕೆಲವು ತಿಂಗಳುಗಳಲ್ಲಿ ತಿದ್ದುಪಡಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕೆಂದು ಸರ್ಕಾರ ಒತ್ತಾಯಿಸುತ್ತಿದೆ. ಈ ಬಗ್ಗೆ ಸರ್ಕಾರ ಅಧಿಸೂಚನೆ ಹೊರಡಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ವಾಹನಗಳು ದೋಷಯುಕ್ತವೆಂದು ಕಂಡುಬಂದಲ್ಲಿ ಅದಕ್ಕೆ ವಿಧಿಸುವ ದಂಡವನ್ನು 10 ಲಕ್ಷದಿಂದ 1 ಕೋಟಿ ರೂಪಾಯಿಗಳವರೆಗೆ ನಿಗಧಿಪಡಿಸಲಾಗಿದೆ. ದಂಡ ವಾಹನವನ್ನು ಅವಲಂಭಿಸಿರುತ್ತದೆ.
ಮಾರ್ಚ್ ನಲ್ಲಿಯೇ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಈಗ ಮತ್ತೆ ಅಧಿಸೂಚನೆ ಹೊರಡಿಸಿದೆ. ಶೀಘ್ರವೇ ಬದಲಾವಣೆ ಜಾರಿಗೆ ಬರುವ ಸಾಧ್ಯತೆಯಿದೆ.