ನವದೆಹಲಿ: ಮೇ 17 ರ ನಂತರ ಕೇಂದ್ರದಿಂದ ಮತ್ತೆ ಹೊಸ ಮಾರ್ಗಸೂಚಿ ಹೊರಡಿಸಲಾಗುತ್ತದೆ. ಮೇ 17 ರ ನಂತರ ಯಾವ ಚಟುವಟಿಕೆ ನಿಷೇಧಿಸಬೇಕು ಮತ್ತು ಯಾವ ಚಟುವಟಿಕೆಯನ್ನು ನಿಷೇಧಿಸಬಾರದು ಎಂಬ ಬಗ್ಗೆ ನಾಳೆ ಮಧ್ಯಾಹ್ನ 3 ಗಂಟೆಗೆ ಪ್ರಧಾನಿ ಮೋದಿ ಚರ್ಚೆ ನಡೆಸಲಿದ್ದಾರೆ.
ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. 6 ಚಟುವಟಿಕೆ ಹೊರತುಪಡಿಸಿ ಎಲ್ಲಾ ಚಟುವಟಿಕೆ ನಡೆಸಲು ಅವಕಾಶ ನೀಡಲು ಪ್ಲಾನ್ ಮಾಡಿಕೊಳ್ಳಲಾಗಿದೆ.
ಸಾರ್ವಜನಿಕ ಸಭೆ, ಸಮಾರಂಭ, ಶಾಲಾ –ಕಾಲೇಜು, ವಾರದ ಸಂತೆ ಸೇರಿ ಕೆಲವೊಂದು ಚಟುವಟಿಕೆಗೆ ನಿರ್ಬಂಧ ಹೇರಲಾಗುವುದು. ಈಗಾಗಲೇ ಕೇಂದ್ರದಿಂದ ಎರಡು ಸಲ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ದೇಶದಲ್ಲಿ ಆರ್ಥಿಕ ಚಟುವಟಿಕೆಗೆ ಅವಕಾಶ ನೀಡಲಾಗಿದೆ. ಆದರೆ ಎರಡು ಮಾರ್ಗಸೂಚಿಗಳಿಂದ ಜನರಲ್ಲಿ ಗೊಂದಲ ಸೃಷ್ಟಿಯಾಗಿದೆ. ಇದು ಕೇಂದ್ರ ಸರ್ಕಾರದ ಚಿಂತೆಗೆ ಕಾರಣವಾಗಿದೆ. ಇದನ್ನು ಬಗೆಹರಿಸಲು ಹೊಸ ಮಾರ್ಗಸೂಚಿ ಹೊರಡಿಸಬೇಕಿದೆ.
ಆರೋಗ್ಯ, ಗೃಹ, ಹಣಕಾಸು ಇಲಾಖೆಯ ಪ್ರಸ್ತಾಪಗಳನ್ನು ಪರಿಶೀಲಿಸಲಾಗುವುದು. ನಾಳೆ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ಚರ್ಚೆ ನಡೆಸಿ ಮೇ 15ಕ್ಕೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ಹೇಳಲಾಗಿದೆ.