alex Certify ಮೇ 15 ರ ವರೆಗೆ ಲಾಕ್ ಡೌನ್ ವಿಸ್ತರಣೆಗೆ ಮುಖ್ಯಮಂತ್ರಿಗಳ ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೇ 15 ರ ವರೆಗೆ ಲಾಕ್ ಡೌನ್ ವಿಸ್ತರಣೆಗೆ ಮುಖ್ಯಮಂತ್ರಿಗಳ ಆಗ್ರಹ

ನವದೆಹಲಿ: ಜಾರಿಯಲ್ಲಿರುವ ಲಾಕ್ ಡೌನ್ ಮೇ 3 ಕ್ಕೆ ಮುಕ್ತಾಯವಾಗಲಿದ್ದು, ಮೇ 15 ರ ವರೆಗೂ ಲಾಕ್ ಡೌನ್ ಮುಂದುವರೆಸಬೇಕೆಂದು 6 ರಾಜ್ಯಗಳ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಕೇಂದ್ರ ಸರ್ಕಾರದ ನಿರ್ದೇಶನ ಪಾಲಿಸಲು ಕೆಲವು ರಾಜ್ಯಗಳು ತೀರ್ಮಾನ ಕೈಗೊಂಡಿದ್ದು, 6 ರಾಜ್ಯಗಳಿಂದ ಲಾಕ್ ಡೌನ್ ವಿಸ್ತರಣೆಗೆ ಮನವಿ ಮಾಡಲಾಗಿದೆ. ಮೇ 3 ರ ನಂತರ ವಿಸ್ತರಣೆಗೆ ದೆಹಲಿ, ಪಂಜಾಬ್, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ಪಶ್ಚಿಮ ಬಂಗಾಳ ರಾಜ್ಯ ಸರ್ಕಾರಗಳು ಮನವಿ ಮಾಡಿವೆ.

ತೆಲಂಗಾಣ ಸರ್ಕಾರ ಮೇ 7 ರವರೆಗೆ ಈಗಾಗಲೇ ಲಾಕ್ಡೌನ್ ವಿಸ್ತರಿಸಿದೆ. ಕರ್ನಾಟಕ, ಆಂಧ್ರಪ್ರದೇಶ ಸರ್ಕಾರಗಳಿಂದ ಗ್ರೀನ್ ಜೋನ್ ಗಳಿಗೆ ವಿನಾಯಿತಿ ನೀಡಲು ಮನವಿ ಮಾಡುವ ಸಾಧ್ಯತೆ ಇದೆ.

ಗುಜರಾತ್, ಹಿಮಾಚಲ ಪ್ರದೇಶ, ಹರಿಯಾಣ ಸೇರಿದಂತೆ ಕೆಲವು ರಾಜ್ಯಗಳಿಂದ ಕೇಂದ್ರದ ನಿರ್ದೇಶನ ಪಾಲನೆಗೆ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಧಾನಿ ಮೋದಿ ಮುಖ್ಯಮಂತ್ರಿಗಳೊಂದಿಗೆ ನಾಳೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಲಾಕ್ ಡೌನ್ ಮುಂದುವರೆಸುವ ಕುರಿತು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಈಗಾಗಲೇ ಅನೇಕ ಚಟುವಟಿಕೆಗಳಿಗೆ ಕೇಂದ್ರ ಸರ್ಕಾರ ವಿನಾಯಿತಿ ನೀಡಿದೆ. ಕೇಂದ್ರದ ವಿನಾಯಿತಿ ಹೊರತಾಗಿ ದೆಹಲಿ ಸರ್ಕಾರದಿಂದ ಲಾಕ್ ಡೌನ್ ನಲ್ಲಿ ಯಾವುದೇ ವಿನಾಯಿತಿ ನೀಡುವುದಿಲ್ಲ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...