ನವದೆಹಲಿ: ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೈರ್ಮಲ್ಯ ಯೋಜನೆಗಳಿಗಾಗಿ ಕೇಂದ್ರ ಸರ್ಕಾರದ ವತಿಯಿಂದ ರಾಜ್ಯಕ್ಕೆ 804 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ.
15 ನೇ ಹಣಕಾಸು ಆಯೋಗದ ಶಿಫಾರಸಿನ ಅನ್ವಯ 2020 – 21ನೇ ಹಣಕಾಸು ವರ್ಷದಲ್ಲಿ ರಾಜ್ಯಕ್ಕೆ ಅನುದಾನ ನೀಡಲಾಗಿದೆ ಎಂದು ಹೇಳಲಾಗಿದೆ. ಕೇಂದ್ರ ಸರ್ಕಾರ ನೀಡಿರುವ ಸೂಚನೆಯಂತೆ ರಾಜ್ಯ ಸರ್ಕಾರಗಳು ಗ್ರಾಮಪಂಚಾಯಿತಿಗಳಿಗೆ ಹಣವನ್ನು 10 ಕೆಲಸದ ದಿನಗಳೊಳಗೆ ಬಿಡುಗಡೆ ಮಾಡಬೇಕಿದೆ.
ಗ್ರಾಮೀಣ ಪ್ರದೇಶದಲ್ಲಿ ಬಯಲು ಮುಕ್ತ ಶೌಚಾಲಯ, ಕುಡಿಯುವ ನೀರು ಪೂರೈಕೆ, ಮಳೆನೀರು ಸಂಗ್ರಹ, ನೀರಿನ ಮರುಬಳಕೆ ಯೋಜನೆಗೆ ಅನುದಾನ ಬಳಸಿಕೊಳ್ಳಬಹುದಾಗಿದೆ. ಪಂಚಾಯತ್ ರಾಜ್, ಕೇಂದ್ರ ಕುಡಿಯುವ ನೀರು, ನೈರ್ಮಲ್ಯ ಸಚಿವಾಲಯ, ಜಲಶಕ್ತಿ ಸಚಿವಾಲಯದ ಶಿಫಾರಸಿನ ಮೇರೆಗೆ ವಿವಿಧ ರಾಜ್ಯಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದೆ.