
ಹೈದರಾಬಾದ್: ಊಟದಲ್ಲಿ ಮತ್ತು ಬರುವ ಔಷಧಿ ಬೆರೆಸಿಕೊಟ್ಟು ಮತ್ತಿನಲ್ಲಿದ್ದ ತಾಯಿ ಮತ್ತು ಮಗಳ ಮೇಲೆ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.
ಹೈದರಾಬಾದ್ ಚಂದಾನಗರದ ಪಾಪಿರೆಡ್ಡಿ ಕಾಲೋನಿ ಸಂದಯ್ಯನಗರದ ನಿವಾಸಿಯಾಗಿರುವ ಜಮೀನ್ದಾರ ಮತ್ತು ಆತನ ಸಹಚರರು ಸೇರಿಕೊಂಡು ಈ ಕೃತ್ಯವಸೆಗಿದ್ದಾರೆ.
ಸಂತ್ರಸ್ತ ಮಹಿಳೆ ಮತ್ತು ಆಕೆಯ ಇಬ್ಬರು ಮಕ್ಕಳು ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಜಮೀನ್ದಾರ ಮತ್ತು ಆತನ ಸಹಚರರು ಊಟದಲ್ಲಿ ಮತ್ತು ಬರುವ ಔಷಧಿ ಸೇರಿಸಿಕೊಟ್ಟಿದ್ದಾರೆ. ನಿದ್ದೆ ಮಂಪರಿನಲ್ಲಿ ಮಲಗಿದ್ದ ತಾಯಿ ಮತ್ತು ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿದ್ದು ಇಬ್ಬರನ್ನು ಉಸ್ಮಾನಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಊಟ ಸೇವಿಸಿದ್ದ 10 ವರ್ಷದ ಪುತ್ರನನ್ನು ಕೂಡ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಂದಾನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಜಮೀನ್ದಾರ ಮತ್ತು ಆತನ ಸಹಚರರನ್ನು ಬಂಧಿಸಿದ್ದಾರೆ.