alex Certify BIG NEWS: ಕಾಂಗ್ರೆಸ್ ಗೆ ವೋಟ್ ಮಾಡಿ ಎಂದ ಬಿಜೆಪಿ ನಾಯಕ, ವಿಡಿಯೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ಗೆ ವೋಟ್ ಮಾಡಿ ಎಂದ ಬಿಜೆಪಿ ನಾಯಕ, ವಿಡಿಯೋ ವೈರಲ್

ಭೋಪಾಲ್: ಮಧ್ಯಪ್ರದೇಶದಲ್ಲಿ ನವೆಂಬರ್ 3 ರಂದು ಮತದಾನ ನಡೆಯಲಿರುವ ಉಪಚುನಾವಣೆ ಪ್ರಚಾರ ಸಭೆಗಳಲ್ಲಿ ಬಿಜೆಪಿ ನಾಯಕರೊಬ್ಬರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವಂತೆ ಕರೆ ನೀಡಿದ್ದಾರೆ.

ಬಿಜೆಪಿ ರಾಜ್ಯಸಭೆ ಸದಸ್ಯ ಜ್ಯೋತಿರಾಧಿತ್ಯ ಸಿಂಧ್ಯ ಕಾಂಗ್ರೆಸ್ ಪಕ್ಷಕ್ಕೆ ಮತ ಚಲಾಯಿಸುವಂತೆ ಮತದಾರರಿಗೆ ಮನವಿ ಮಾಡಿದ್ದಾರೆ. ಗ್ವಾಲಿಯರ್ ನ ದಾಬ್ರಾ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಇಮಾರ್ತಿದೇವಿ ಪರವಾಗಿ ನಡೆದ ರ್ಯಾಲಿಯಲ್ಲಿ ಸಿಂಧಿಯಾ ಕಾಂಗ್ರೆಸ್ ಪರ ಮತ ಚಲಾಯಿಸಲು ಕರೆ ನೀಡಿದ್ದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.

ಮಾತಿನ ಭರದಲ್ಲಿ ಮಿಸ್ ಆಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಅವರು ಹೇಳಿದ್ದು, ಬಳಿಕ ಮಾತು ಬದಲಿಸಿ ಬಿಜೆಪಿ ಕಮಲದ ಚಿಹ್ನೆಗೆ ಮತ ಹಾಕಬೇಕೆಂದು ಮನವಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...